More

    ರಾಜ್ಯದಲ್ಲಿ ಕೆಲವೆಡೆ ಮಳೆ, ಇನ್ನುಳಿದೆಡೆ ಭಾರೀ ಬಿಸಿಲು; IMDಯಿಂದ ಉಷ್ಣಾಂಶ ಹೆಚ್ಚಳ ಎಚ್ಚರಿಕೆ!

    Weather update 19-10-2023: ರಾಜ್ಯದಲ್ಲಿ ಹವಾಮಾನ ಭಿನ್ನವಾಗಿದೆ. ಕೆಲವೆಡೆ ಭಾರೀ ಮಳೆ, ಇನ್ನೊಂದಷ್ಟು ಭಾರೀ ಬಿಸಿಲು ಕಂಡು ಬರುತ್ತಿದೆ. ರಾಜ್ಯದ ಕೆಲ ಬಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದರೆ. ಇನ್ನೂ ಹಲವೆಡೆ ಭಾರೀ ಬಿಸಿಲಿದೆ.


    ರಾಜ್ಯದ ಕರಾವಳ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಮಂಗಳವಾರ ಹಾಗೂ ಬುಧವಾರ ದಕ್ಷಿಣ ಒಳನಾಡಿನ ಕೊಡಗು & ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ, ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


    ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂ ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.


    ಹವಾಮಾನ ಇಲಾಖೆಯಿಂದ ಉಷ್ಣಾಂಶ ಹೆಚ್ಚಳವಾಗುವ ಎಚ್ಚರಿಕೆ!
    ರಾಜ್ಯದ ಉತ್ತರ ಭಾಗದಲ್ಲಿ ಭಾರೀ ತಾಪಮಾನವಿದ್ದು, ಇದು ಇನ್ನೂ ಹೆಚ್ಚಳವಾಗಲಿದೆ.


    ಗರಿಷ್ಠ ಉಷ್ಣಾಂಶ: ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ ರಾಯಚೂರು, ಯಾದಗಿರಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ತಿಳಿಸಿದೆ.


    ಮಂಡ್ಯ, ಮೈಸೂರು, ಚಿತ್ರದುರ್ಗ, ಹಾಸನ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.


    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು ತುಮಕೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ 1- 2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts