More

    ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರೀ ಮಳೆ, ಸಿಡಿಲು ಸಹಿತ ಬಲವಾದ ಗಾಳಿ ಬೀಸುವ ಮುನ್ನೆಚ್ಚರಿಕೆ

    Weather update: 10-09-2023: ಕಳೆದ 2-3 ದಿನಗಳಿಂದ ದೇಶದಲ್ಲಿ ವರುಣನ ಸಿಂಚನವಾಗುತ್ತಿದೆ. ಕೆಲವೆಡೆ ತುಂತುರು ಮಳೆಯಾಗಿದ್ದು, ಇನ್ನೂ ಕೆಲವೆಡೆ ಧಾರಾಕಾರ ಮಳೆಯಾಗಿದೆ. ಹವಾಮಾನ ವಿಜ್ಞಾನ ಇಲಾಖೆ (ಐಎಂಡಿ) ಪ್ರಕಾರ ಇಂದು ಕೂಡ ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಗುಜರಾತ್‌’ನಲ್ಲಿ ಮಳೆಯಾಗಲಿದೆ. ಮಹಾರಾಷ್ಟ್ರ ಮತ್ತು ಈಶಾನ್ಯ ಭಾರತದಲ್ಲಿ ಸೆಪ್ಟೆಂಬರ್ 9 ರಿಂದ ಪ್ರಾರಂಭವಾದ ಮಳೆ ಸೆಪ್ಟೆಂಬರ್ 11 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ.


    ಕರ್ನಾಟಕದ ಹವಾಮಾನ ವರದಿ:
    ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನೊಂದೆಡೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.


    ಈ ಮಧ್ಯೆ ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆಯು ರೂಪುಗೊಳ್ಳುತ್ತಿದೆ. ಇದರಿಂದಾಗಿ ಸೆಪ್ಟೆಂಬರ್ 12 ರಿಂದ ಒಡಿಶಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ ಚಟುವಟಿಕೆಗಳು ಹೆಚ್ಚಾಗಲಿವೆ. ಇನ್ನು ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.


    IMD ಪ್ರಕಾರ, ಇಂದು ಅಂದರೆ ಸೆಪ್ಟೆಂಬರ್ 10 ರಂದು, ಕೊಂಕಣ ಗೋವಾ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಲಘುವಾಗಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ಸೆಪ್ಟೆಂಬರ್ 12 ರವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶದಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ನಿರೀಕ್ಷೆ ಇದೆ. ಸೆಪ್ಟೆಂಬರ್ 12 ರಂದು ಅಸ್ಸಾಂ ಮತ್ತು ಮೇಘಾಲಯದ ವಿವಿಧ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts