More

    ಭಾರೀ ಮಳೆ, ಮಂಜು… ಈ ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಐಎಂಡಿ

    ನವದೆಹಲಿ: ಹವಾಮಾನ ಇಲಾಖೆಯ ಪ್ರಕಾರ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ , ಪಶ್ಚಿಮ ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನವು 7 ರಿಂದ 12 ಡಿಗ್ರಿ ಸೆಲ್ಸಿಯಸ್ ನಡುವೆ ದಾಖಲಾಗಿದೆ. ಇದು ಸಾಮಾನ್ಯಕ್ಕಿಂತ 1 ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ಶುಕ್ರವಾರ ಹರಿಯಾಣದ ಹಿಸಾರ್‌ನಲ್ಲಿ ಕನಿಷ್ಠ ತಾಪಮಾನ 3.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.  

    ಮಧ್ಯಪ್ರದೇಶ ಮತ್ತು ವಿದರ್ಭದಲ್ಲಿ ಆಲಿಕಲ್ಲು ಮಳೆ

    ಮಧ್ಯಪ್ರದೇಶ ಮತ್ತು ವಿದರ್ಭದ ವಿವಿಧ ಸ್ಥಳಗಳಲ್ಲಿ ಆಲಿಕಲ್ಲು ಮಳೆ ದಾಖಲಾಗಿದೆ. ಹರಿಯಾಣದ ವಿವಿಧ ಭಾಗಗಳಲ್ಲಿ ಶೀತದ ವಾತವರಣ ಹಾಗೂ ಪಂಜಾಬ್, ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಬಿಹಾರ ಮತ್ತು ಜಾರ್ಖಂಡ್‌ನ ವಿವಿಧ ಭಾಗಗಳಲ್ಲಿ ದಟ್ಟವಾದ ಮಂಜು ಕಂಡುಬಂದಿದೆ .

    ದೆಹಲಿಯಲ್ಲಿ ಬೆಳಗ್ಗೆ ಮಂಜು ಇದೆ. ನಂತರ ಆಕಾಶವು ಸ್ಪಷ್ಟವಾಗಿರುತ್ತದೆ. ಇಂದು ಕನಿಷ್ಠ ತಾಪಮಾನ 8 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆ ಇದೆ.

    ಈ ರಾಜ್ಯಗಳಲ್ಲಿ ಮಳೆಯಾಗಿದೆ

    ಹವಾಮಾನ ಇಲಾಖೆಯ ಪ್ರಕಾರ, ಫೆಬ್ರವರಿ 16 ರಂದು, ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್, ಒಡಿಶಾ, ಅಸ್ಸಾಂ, ಮೇಘಾಲಯ, ಗಂಗಾ ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ , ಮಿಜೋರಾಂ, ತ್ರಿಪುರಾ ಮತ್ತು ತಮಿಳುನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts