More

    ನವೆಂಬರ್‌ 22 ರವರೆಗೂ ರಾಜ್ಯದ ಈ ಜೆಲ್ಲೆಗಳಲ್ಲಿ ಉತ್ತಮ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ..!

    ಬೆಂಗಳೂರು ಸೇರಿ ರಾಜ್ಯದಲ್ಲಿ ವರುಣ ಅಬ್ಬರಿಸಿ ಬೊಬ್ಬೆರೆಯಲಿದ್ದಾನೆ. ಕರಾವಳಿಯ ಹಲವು ಜಿಲ್ಲೆಗಳಲ್ಲಿ ಜೋರು ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


    ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವರುಣ ಅಬ್ಬರಿಸಲಿದ್ದಾನೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಮಳೆಯಾಗಲಿದೆ.
    ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನವೆಂಬರ್ 19 ರಿಂದ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


    ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆಗಳಿದೆ. ನವೆಂಬರ್ 19 ರಿಂದ 22 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


    ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದ್ದು, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
    ಬೆಂಗಳೂರಿನಲ್ಲಿ ಸಂಜೆ ಸಮಯ ಮೋಡಕವಿದ ವಾತಾವರಣ ನಿರ್ಮಾಣವಾಗಿ ಮಳೆಯಾಗುವ ಸಾಧ್ಯತೆ ಇದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts