More

    ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!

    Weather Update 01-12-2023: ಬೆಂಗಳೂರು ಸೇರಿ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದಾನೆ. ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಂಗಾರು ಮಳೆ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆ. ಆದ್ರೂ ಈ ವೇಳೆಯ ಭಾರೀ ಮಳೆ ಬರಬಹುದು ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ.


    ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲೂ ನಾಲ್ಕು ದಿನಗಳ ಕಾಲ ಮಳೆ ಇರಲಿದೆ.
    ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರಮರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ.


    ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಮಾತ್ರ, ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಮಳೆ ಸಾಧ್ಯತೆ ಇದೆ.


    ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ ಗುರುವಾರ ಭಾರೀ ಮಳೆಯಾಗಿದ್ದು, ಅನೇಕ ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿದೆ ಮತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇಂದು ಕೂಡ ಮಳೆ ಮುಂದುವರೆಯಲಿದ್ದು, ತಿರುವಳ್ಳೂರು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನ ಘೋಷಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts