More

    ಹವಾಮಾನ ವರದಿ: ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಎಲ್ಲಿ ಎಷ್ಟು ಚಳಿಯಿದೆ?

    ಬೆಂಗಳೂರು: ರಾಜ್ಯದ ಹಲವೆಡೆ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಕರಾವಳಿ ಪ್ರದೇಶಗಳಾದ ಉಡುಪಿ, ಮಂಗಳೂರು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಮೈಸೂರು, ಮಂಡ್ಯ, ಮಡಿಕೇರಿ, ರಾಮನಗರ, ಹಾಸನ, ಚಿಕ್ಕಬಳ್ಳಾಪುರ ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ರಾಯಚೂರು ನಗರಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೊಂಚ ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

    ದೇಶದ ಹಲವು ರಾಜ್ಯಗಳಲ್ಲಿ ತಾಪಮಾನದಲ್ಲಿ ಇಳಿಕೆ ಕಂಡುಬಂದಿದ್ದು, ಚಳಿ ಮತ್ತಷ್ಟು ಹೆಚ್ಚಾಗಿದೆ. ರಾಜಧಾನಿ ದೆಹಲಿಯಲ್ಲೂ ಇದೇ ಪರಿಸ್ಥಿತಿ ಇದೆ. ಇಲ್ಲಿ ಸೋಮವಾರ (ಡಿ.11) ಅತ್ಯಂತ ಚಳಿಯಿತ್ತು. ಹವಾಮಾನ ಇಲಾಖೆ ಪ್ರಕಾರ ಡಿಸೆಂಬರ್ 15ರ ವೇಳೆಗೆ ಉತ್ತರ ಭಾರತದ ತಾಪಮಾನದಲ್ಲಿ ಮತ್ತಷ್ಟು ಇಳಿಕೆಯಾಗಲಿದೆ.

    ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಂಗಳವಾರ (ಡಿಸೆಂಬರ್ 12), ದೆಹಲಿ-ಎನ್‌ಸಿಆರ್‌ನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ, ಕನಿಷ್ಠ ತಾಪಮಾನವು 8 ಡಿಗ್ರಿ ಎಂದು ನಿರೀಕ್ಷಿಸಲಾಗಿದೆ. ತಾಪಮಾನದಲ್ಲಿ ಮತ್ತಷ್ಟು ಇಳಿಕೆಯಾಗಲಿದ್ದು, ಬೆಳಗ್ಗೆ ಮಂಜು ಕವಿದಿದೆ ಎಂದು ತಿಳಿಸಲಾಗಿದೆ.

    ದೆಹಲಿಯ ಹವಾಮಾನದಲ್ಲಿ ಏರಿಳಿತ
    ಐಎಂಡಿ ಪ್ರಕಾರ, ಸೋಮವಾರ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ ಅತ್ಯಂತ ತಂಪಾದ ವಾತವರಣವಿತ್ತು. ಕನಿಷ್ಠ ಮರ್ಕ್ಯುರಿ 6.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಈ ಋತುವಿನಲ್ಲಿ ಸರಾಸರಿ ತಾಪಮಾನಕ್ಕಿಂತ ಮೂರು ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ರಾಜಧಾನಿಯಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ. ನಗರದ ಕನಿಷ್ಠ ತಾಪಮಾನ ಶನಿವಾರ 8.5 ಡಿಗ್ರಿ ಸೆಲ್ಸಿಯಸ್ ಮತ್ತು ಭಾನುವಾರ 8.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

    ಎಲ್ಲಿ ಎಷ್ಟಿದೆ?
    ಹವಾಮಾನ ಇಲಾಖೆ ಪ್ರಕಾರ, ಮರ್ಕ್ಯುರಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮೈನಸ್ 4.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದಲ್ಲದೆ, ಗುಲ್ಮಾರ್ಗ್‌ನಲ್ಲಿ ಮೈನಸ್ 4.2 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನ ಮತ್ತು ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ 6-10 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

    10ನೇ ತರಗತಿ ಪಾಸಾದವರಿಗೆ ರೈಲ್ವೆಯಲ್ಲಿ 3000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ಪರೀಕ್ಷೆ ಇರಲ್ಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts