More

  ರಾಜ್ಯದಲ್ಲಿ ಒಣಹವೆ ಮುಂದುವರಿಕೆ, ಮಳೆ ಮುನ್ಸೂಚನೆ ಇಲ್ಲ..!

  Weather Update: 8-2-2024: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಸಾಕಷ್ಟು ಕಡೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  ಸದ್ಯ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

  ಕೆಲವೊಂದು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದೆ. ಕೆಲ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ದಿನದಿಂದ ದಿನಕ್ಕೆ ಚಳಿ ಕಡಿಮೆಯಾಗುತ್ತಿದೆ.

  ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದೆ.

  ಕೆಲವು ದಿನಗಳಿಂದ ಹಗಲಿನಲ್ಲಿ ಶಾಖ ಹೆಚ್ಚುತ್ತಿದ್ದು ಮತ್ತು ರಾತ್ರಿಯ ತಾಪಮಾನದಲ್ಲಿ ಸಹ ಏರಿಳಿತ ಕಂಡುಬರುತ್ತಿದೆ.ಫೆಬ್ರವರಿ ಆರಂಭದಲ್ಲೇ ಬಿಸಿಲು ಹೆಚ್ಚಾಗಿದೆ. ಇನ್ನೂ ಹೆಚ್ಚಾಗಲಿದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ.

  ಭಾರತೀಯ ಹವಾಮಾನ ಇಲಾಖೆ ಮಾರ್ಚ್ ಒಳಗೆ ಉತ್ತಮ ಮಳೆಯಾಗುತ್ತೆ ಎಂದು ಸೂಚನೆ ನೀಡಿದೆ. ಆದರೆ ರಾಜ್ಯದಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಮುನ್ಸೂಚನೆ ಇಲ್ಲ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts