More

    ಜಲಪ್ರಳಯದ ಎಚ್ಚರಿಕೆ ಜೊತೆ ಗುಡುಗು-ಮಿಂಚಿನ ಭೀತಿ; ಮುಂದಿನ 3 ದಿನ ಈ ಭಾಗಗಳಲ್ಲಿ ಧಾರಾಕಾರ ಮಳೆ

    Weather update: ಅರಬ್ಬೀ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಮುಂದಿನ ಕೆಲ ದಿನಗಳ ಕಾಲ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಬೀಳುವ ಮುನ್ಸೂಚನೆ ಇದೆ.


    ಚಂಡಮಾರುತದ ಪರಿಚಲನೆಯು ತಮಿಳುನಾಡು, ಕರ್ನಾಟಕದ ದಕ್ಷಿಣ ಭಾಗಕ್ಕೆ ಬೀಳುತ್ತಿದ್ದರೆ, ಲಕ್ಷದ್ವೀಪ ಪ್ರದೇಶ ಮತ್ತು ಪಕ್ಕದ ಆಗ್ನೇಯ ಅರಬ್ಬಿ ಸಮುದ್ರದ ಪ್ರಭಾವ ಕೇರಳದ ಕರಾವಳಿ ಭಾಗದ ಮೇಲೆ ಇರಲಿದೆ.


    ಅಕ್ಟೋಬರ್ 17ರ ಸುಮಾರಿಗೆ ಆಗ್ನೇಯ ಮತ್ತು ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತವಾಗುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳ ಕಾಲ, ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.


    ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಗಾಳಿ ಮಳೆ ಬೀಳುವ ಮುನ್ಸೂಚನೆ ಇದೆ.


    ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದ್ದು, ಇಂದು ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆ, ಗುಡುಗು, ಬಿರುಗಾಳಿ (30-40 ಕಿ.ಮೀ.) ಮತ್ತು ಮಿಂಚಿನ ಮುನ್ಸೂಚನೆ ಇದೆ.


    ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ದಿನವಿಡೀ ಮಳೆ ಸುರಿಯುವ ಸಾಧ್ಯತೆಯಿದ್ದು, ಈ ಚಂಡಮಾರುತ ಪ್ರಭಾವದಿಂದ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮಳೆಯಾಗಲಿದೆ.


    ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ತುಂತುರು ಮಳೆ ಆಗಲಿದೆ.
    ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts