ನವದೆಹಲಿ: ಮಾನ್ಸೂನ್ ಈಗಾಗಲೇ ಆರಂಭವಾಗಿದ್ದು ಇಡೀ ದೇಶವನ್ನು ಆವರಿಸಿರುವ ಕಾರಣ ಹಲವೆಡೆ ಭಾರೀ ಮಳೆಯಾಗುತ್ತಿದೆ. ಪ್ರವಾಹ ಮತ್ತು ಹಲವು ಪ್ರದೇಶ ಜಲಾವೃತವಾಗಿರುವುದು ಕಂಡುಬಂದಿದೆ. ಮುಂಬರುವ ಐದು ದಿನಗಳಲ್ಲಿ ಭಾರತದ ವಿವಿಧ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಮುಂದಿನ 2-3 ದಿನಗಳಲ್ಲಿ ಈಶಾನ್ಯ ಮತ್ತು ಪೂರ್ವ ಭಾರತದಲ್ಲಿ ಭಾರೀ ಮಳೆಯಾಗುತ್ತದೆ ಎಂದು ತಿಳಿಸಿದೆ.
ಇದನ್ನು ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು; ಸುಪ್ರೀಂ ತೀರ್ಪು
ಉಪ-ಹಿಮಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯಕ್ಕೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಪ್ರದೇಶ, ಬಿಹಾರ, ಮಧ್ಯ ಮಹಾರಾಷ್ಟ್ರ, ಅಸ್ಸಾಂ ಮತ್ತು ಮೇಘಾಲಯಕ್ಕೆ ಆರೆಂಜ್ ಎಚ್ಚರಿಕೆಯನ್ನು ನೀಡಿದ್ದು, ಉತ್ತರ ಭಾರತ ಮತ್ತು ಮಧ್ಯ ಭಾರತದ ಬಹುತೇಕ ರಾಜ್ಯಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ.
ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಕರಾವಳಿ ಕರ್ನಾಟಕಕ್ಕೆ ಸೇರಿದ ಪ್ರದೇಶಗಳು ಮುಂದಿನ 5 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಧ್ಯ ಭಾರತ, ಬಿಹಾರ ಮತ್ತು ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಮಳೆಯಾಗುತ್ತದೆ. ಗುಜರಾತ್, ಆಂಧ್ರಪ್ರದೇಶ ಮತ್ತು ಯಾನಂ, ತೆಲಂಗಾಣದ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 2-3 ದಿನಗಳ ನಂತರ ಮಳೆಯ ತೀವತೆಯು ಕ್ರಮೇಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದೆಹಲಿಯಲ್ಲಿ ಧಾರಾಕಾರ ಮಳೆಯಿಂದಾಗಿ ನಗರದ ಹಲವು ಭಾಗಗಳು ಜಲಾವೃತಗೊಂಡ ಒಂದು ದಿನದ ನಂತರ, ಬುಧವಾರ ರಾಷ್ಟ್ರ ರಾಜಧಾನಿ ಮಂದಿ ಬಿಸಲನ್ನು ಕಂಡರು. ಮೋಡ ಕವಿದ ವಾತಾವರಣದಿಂದ ದೆಹಲಿಯಲ್ಲಿ ಹಗಲಿನಲ್ಲಿ ಸ್ವಲ್ಪ ಮಳೆಯಾಗುತ್ತದೆ ಎಂದು ಐಎಂಡಿ ತಿಳಿಸಿದೆ. (ಏಜೆನ್ಸೀಸ್)
ಪುಟಿನ್ ಜತೆಗಿನ ಪ್ರಧಾನಿ ಮೋದಿ ಭೇಟಿ ಖಂಡನೀಯ; ಯೂಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೀಗೆಳಿದ್ದೇಕೆ?