More

    ಬಾಗಲಕೋಟೆಯಲ್ಲಿ ನೇಕಾರರ ಸಮಾವೇಶ

    ಬಾಗಲಕೋಟೆ: ನೇಕಾರ ಸಮುದಾಯಗಳ ಸಂಘಟನೆ ಹಾಗೂ ಅಭಿವೃದ್ಧಿ ಉದ್ದೇಶದಿಂದ ಬಾಗಲಕೋಟೆ ನಗರದಲ್ಲಿ ಮುಂದಿನ ತಿಂಗಳು ಬೃಹತ್ ನೇಕಾರರ ಸಮುದಾಯಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್.ಸೋಮಶೇಖರ ಹೇಳಿದರು.

    ನಗರದ ಪ್ರೇಸ್‌ಕ್ಲಬ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಬರುವಿಕೆ ತಿಳಿಸಿದ ನಂತರ ಸ್ಥಳ ಹಾಗೂ ದಿನಾಂಕವನ್ನು ತಿಳಿಸಲಾಗುತ್ತದೆ ಎಂದರು.

    ರಾಜ್ಯದ ಹಿಂದುಳಿದ ವರ್ಗಕ್ಕೆ ಸೇರಿದ ನೇಕಾರ ಸಮುದಾಯವು 60 ಲಕ್ಷ ಜನಸಂಖ್ಯೆ ಹೊಂದಿದ್ದು, ಶೈಕ್ಷಣಿಕ, ರಾಜಕೀಯ ಹಾಗೂ ಆರ್ಥಿಕ ಬಲವರ್ಧನೆಗಾಗಿ ಹಿಂದಿನ ಬಿಜೆಪಿ ಸರಕಾರ ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ಆದರೆ, ಇನ್ನೂ ಕಾರ್ಯಾರಂಭ ಮಾಡಿಲ್ಲ. ಕಾರಣ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿಗಮ ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಸಿದ್ದರಾಮಯ್ಯ ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾತಿ ಸಮೀಕ್ಷೆ ಕೈಗೊಂಡಿದ್ದರು. ಕೂಡಲೇ ಅದನ್ನು ಬಿಡುಗಡೆಗೊಳಿಸಬೇಕು. ಇದರಿಂದ ಆಯಾ ಸಮುದಾಯಗಳ ಜನರು ಎಷ್ಟಿದ್ದಾರೆ, ಅವರ ಅಭಿವದ್ಧಿಗೆ ಏನು ಕ್ರಮ ಕೈಗೊಳ್ಳಬೇಕು ಅದಕ್ಕೆ ಬಜೆಟ್ ಎಷ್ಟು ಬೇಕು ಇತ್ಯಾದಿ ಲೆಕ್ಕಾಚಾರ ಮಾಡಿ ಆಯಾ ಸಮಾಜಗಳಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರಲು ಸಹಾಯವಾಗುತ್ತದೆ ಎಂದರು.

    ಒಕ್ಕೂಟದ ಮುಖಂಡ ರವೀಂದ್ರ ಕಲಬುರ್ಗಿ ಮಾತನಾಡಿ, ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರಗಳು ನೇಕಾರರ ವಿದ್ಯುತ್ ಮಗ್ಗಗಳಿಗೆ ಕಡಿಮೆ ದರದಲ್ಲಿ ವಿದ್ಯುತ್ ನೀಡಿರುವುದು ಸಮಾಜಕ್ಕೆ ಅನುಕೂಲವಾಗಿದೆ. ವಿಧಾಸನಸಭೆ ಚುನಾವಣೆ ವೇಳೆಯಲ್ಲಿ ವಿದ್ಯುತ್ ದರ ಹೆಚ್ಚಳದಿಂದ ನೇಕಾರರಿಗೆ ಒಟ್ಟು 3 ಕೋಟಿ ರು. ವಿದ್ಯುತ್ ಬಿಲ್ ಹೆಚ್ಚಿಗೆ ಬಂದಿದ್ದು, ಈ ಬಿಲ್‌ನ್ನು ಸರ್ಕಾರ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

    ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಭಾಗ್ಯಾ ಹಂಡಿ, ಮನೋಹರ ರಕ್ಕಸಗಿ, ವೀರಣ್ಣ ಶಿರಗಣ್ಣವರ ಸೇರಿದಂತೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts