ಕಿರಾಣಿ ಅಂಗಡಿಯಲ್ಲಿ ಪತ್ನಿಗೆ ಐಸ್ ಕ್ಯಾಂಡಿ ಕೊಡಿಸಿದ ಯಶ್!

ನಟ ರಾಕಿಂಗ್ ಸ್ಟಾರ್ ಯಶ್ ಪ್ಯಾನ್ ಇಂಡಿಯಾ ಹೀರೋ ಆಗಿ ಗುರುತಿಸಿಕೊಂಡಿದ್ದಾರೆ. ವಿಶ್ವದಾದ್ಯಂತ ತಮ್ಮದೇ ಆ ಅಭಿಮಾನಿ ಬಳಗವನ್ನು ಹೊಂದಿರುವ ನಟ ಯಶ್ ಎಷ್ಟೇ ಬ್ಯುಸಿ ಇದ್ದರೂ ತಮ್ಮ ಕುಟುಂಬದವರಿಗೆ ಸಮಯವನ್ನು ಮೀಸಲಿಡುತ್ತಾರೆ.

ಇದೀಗ ನಟ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ದೇವಾಲಯ ಒಂದಕ್ಕೆ ಭೇಟಿ ನೀಡಿದ ವೇಳೆ ಸಾಮಾನ್ಯರಂತೆ ರಸ್ತೆ ಬದಿ ಇರುವ ಅಂಗಡಿ ಒಂದಕ್ಕೆ ಭೇಟಿ ನೀಡಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ವೈರಲ್ ಆಗಿದೆ. ಗೆ ಕೃತಜ್ಞರಾಗಿರುತ್ತೇನೆಂದ ಪ್ರಧಾನಿ.

ವೈರಲ್ ಆಗಿರುವ ವಿಡಿಯೋದಲ್ಲಿ ಕುಟುಂಬದವರ ಜೊತೆ ತೆರಳಿರುವ ನಟ ಯಶ್ ರಸ್ತೆ ಬದಿ ಇರುವ ಪೆಟ್ಟಿಗೆ ಅಂಗಡಿಗೆ ಭೇಟಿ ನೀಡಿದ್ದಾರೆ. ಪತ್ನಿ ರಾಧಿಕಾ ಅವರಿಗೆ ಐಸ್ ಕ್ಯಾಂಡಿ ಕೊಡಿಸಿದ್ದಾರೆ. ಬಳಿಕ ಸ್ಥಳೀಯರೊಂದಿಗೆ ಮಾತನಾಡಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಮಾಲಿವುಡ್ ನಿರ್ದೇಶಕಿ ಗೀತು ಮೋಹನ್ ದಾಸ್ ನಿರ್ದೇಶನದ ಟಾಕ್ಸಿಕ್ ಸಿನಿಮಾದ ಚಿತ್ರೀಕರಣದಲ್ಲಿ ನಟ ಯಶ್ ಬ್ಯುಸಿ ಇದ್ದಾರೆ.