ಮದ್ಯಪ್ರಿಯರಿಗೆ ಶಾಕ್ ನೀಡಿದ ಸರ್ಕಾರ; ರಾತ್ರೋರಾತ್ರಿ ಏರಿಕೆಯಾಯ್ತು ಬಿಯರ್ ಬೆಲೆ

ಬಜೆಟ್​ ಮಂಡನೆಯಾಗುವುದಕ್ಕೂ ಮುನ್ನವೇ ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಶಾಕ್ ನೀಡಿದ್ದು, ಫೆಬ್ರವರಿ 01ರಿಂದ ಅನ್ವಯವಾಗುವಂತೆ ಬಿಯರ್​ ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಅಬಕಾರಿ ಸುಂಕವನ್ನು ಶೇ.185 ರಿಂದ 195ಕ್ಕೆ ಹೆಚ್ಚಳ ಮಾಡಿರುವುದರಿಂದ ಬಿಯರ್‌ ಬೆಲೆಯನ್ನು ಏರಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎರಡನೇ ಬಾರಿಗೆ ಬಿಯರ್ ದರವನ್ನು ಹೆಚ್ಚಿಸಿದ್ದು, 2023ರ ಜುಲೈ 07ರಂದು ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇ.20 ರಷ್ಟು ಹೆಚ್ಚಳ ಮಾಡಲಾಗಿತ್ತು. ಫೆಬ್ರವರಿ 16ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಇದಾದ ಬಳಿಕ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡುವ ಸಾಧ್ಯತೆ ದಟ್ಟವಾಗಿದೆ.