Astrology: ಇನ್ನೇನು ಕೆಲವೇ ದಿನಗಳಲ್ಲಿ 2026 ರ ಹೊಸ ವರ್ಷ ಆರಂಭವಾಗಲಿದೆ. ಈ ಸಂದರ್ಭವನ್ನು ಬರಮಾಡಿಕೊಳ್ಳಲು ಅನೇಕರು ತುದಿಗಾಲಿನಲ್ಲಿ ನಿಂತಿದ್ದಾರೆ. ಹೊಸ ವರ್ಷದ ಜನವರಿ 7, 2026 ರಂದು ಬುಧ ಗ್ರಹವು ಪೂರ್ವಾಷಾಢ ನಕ್ಷತ್ರವನ್ನು ಪ್ರವೇಶಿಸುತ್ತಾನೆ. ಇದನ್ನು ಜ್ಯೋತಿಷ್ಯದಲ್ಲಿ ಪ್ರಮುಖ ಗ್ರಹ ಸಂಚಾರವೆಂದು ಪರಿಗಣಿಸಲಾಗಿದೆ.
ಬುಧ ಗ್ರಹವು ಬುದ್ಧಿವಂತಿಕೆ, ಆಲೋಚನಾ ಸಾಮರ್ಥ್ಯ, ಸಂವಹನ ಮತ್ತು ಲೆಕ್ಕಾಚಾರಗಳೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಗ್ರಹಗಳ ಸಂಯೋಗವು ಕೆಲವೊಂದು ರಾಶಿಚಕ್ರಗಳ ಮೇಲೆ ಪರಿಣಾಮವನ್ನು ಬೀರುತ್ತವೆ. ಹಾಗಿದ್ದರೆ, ಆ ರಾಶಿಗಳು ಯಾವುದು ಎಂದು ನೋಡೋಣ ಬನ್ನಿ...
ಮೇಷ ರಾಶಿ
ಈ ಸಮಯವು ಮೇಷ ರಾಶಿಯವರಿಗೆ ವೃತ್ತಿಪರವಾಗಿ ಹೆಚ್ಚಿನ ಪರಿಹಾರವನ್ನು ತರುತ್ತದೆ. ಬಹಳ ದಿನಗಳಿಂದ ಸ್ಥಗಿತಗೊಂಡಿದ್ದ ಕೆಲಸಗಳು ಮುಂದುವರೆಯುತ್ತವೆ. ಉದ್ಯೋಗ ಹಡುಕುತ್ತಿರುವವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಹಣಕಾಸಿನ ವಿಷಯಗಳಲ್ಲಿ ಅದೃಷ್ಟವು ನಿಮಗೆ ಅನುಕೂಲಕರವಾಗಿರುತ್ತದೆ. ಈ ಸಮಯದಲ್ಲಿ ಹಳೆಯ ಹೂಡಿಕೆಗಳು ಹೆಚ್ಚಿನ ಲಾಭವನ್ನು ನೀಡಬಲ್ಲವು. ವಿಶೇಷವಾಗಿ ನಿಮ್ಮ ತಂದೆಗೆ ಸಂಬಂಧಿಸಿದ ಪ್ರಯೋಜನಗಳನ್ನು ನೀವು ಪಡೆಯಬಹುದು.
ತುಲಾ ರಾಶಿ
ಗ್ರಹಗಳ ಸಂಚಾರವು ತುಲಾ ರಾಶಿಯವರಿಗೆ ನಿಮ್ಮ ಆತ್ಮವಿಶ್ವಾಸ ಮತ್ತು ಪ್ರಭಾವವನ್ನು ಹೆಚ್ಚಿಸುತ್ತದೆ. ನಿಮ್ಮ ಮಾತುಗಳು ಇತರರನ್ನು ಪ್ರೇರೇಪಿಸಲಿವೆ. ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ಷೇರು ಮಾರುಕಟ್ಟೆ, ವ್ಯಾಪಾರ ಅಥವಾ ಅಪಾಯಕಾರಿ ಹೂಡಿಕೆಗಳಲ್ಲಿ ತೊಡಗಿರುವವರು ಅನಿರೀಕ್ಷಿತ ಲಾಭಗಳನ್ನು ಗಳಿಸುವ ಸಾಧ್ಯತೆಯಿದೆ. ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲಿದ್ದೀರಿ. ಈ ಹೊಸ ವರ್ಷವು ಅನೇಕ ರೀತಿಯಲ್ಲಿ ಶುಭವನ್ನು ನೀಡಲಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ, ಬುಧನ ಈ ಸಂಚಾರವು ಹಣಕಾಸಿನ ವಿಷಯಗಳಿಗೆ ಶುಭ ಚಿಹ್ನೆಗಳನ್ನು ನೀಡುತ್ತದೆ. ಈ ಸಮಯದಲ್ಲಿ ಜನರ ಆದಾಯದಲ್ಲಿ ಹೆಚ್ಚಳವಾಗಬಹುದು. ಹಳೆಯ ಹೂಡಿಕೆಗಳು ಉತ್ತಮ ಲಾಭವನ್ನು ನೀಡುತ್ತವೆ. ಉದ್ಯೋಗ ಹುಡುಕುತ್ತಿರುವವರಿಗೆ ಅನುಕೂಲಕರವಾಗಲಿದೆ. ವಿದ್ಯಾರ್ಥಿಗಳು ಅಧ್ಯಯನದತ್ತ ಗಮನಹರಿಸಲಿದ್ದಾರೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸಿನ ಸಾಧ್ಯತೆಗಳು ಹೆಚ್ಚಾಗುತ್ತವೆ (ಏಜೆನ್ಸೀಸ್).
ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್” ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.