More

    ದಕ್ಷಿಣ ಕನ್ನಡದಲ್ಲಿ ವೀಕೆಂಡ್ ಕರ್ಫ್ಯೂ ಸಂದರ್ಭ ದಿನಸಿ ಸಹಿತ ಎಲ್ಲವೂ ಬಂದ್

    ಮಂಗಳೂರು: ಜಿಲ್ಲಾಡಳಿತದ ನಿಯಮ ಮತ್ತೆ ಬದಲಾಗಿದೆ. ವೀಕೆಂಡ್ ಕರ್ಫ್ಯೂ ಸಂದರ್ಭ ಅಗತ್ಯ ವಸ್ತುಗಳ ಖರೀದಿಗೆ ನೀಡಲಾಗಿದ್ದ ಅವಕಾಶವನ್ನು ರದ್ದುಪಡಿಸಲಾಗಿದ್ದು, ದಿನಸಿ ಸಹಿತ ಯಾವುದೇ ಅಂಗಡಿಗಳನ್ನು ತೆರೆಯುವುದಕ್ಕೆ ಅವಕಾಶ ಇಲ್ಲ.

    ವಾರಾಂತ್ಯ ಕರ್ಫ್ಯೂ ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ಜಾರಿಯಲ್ಲಿರುತ್ತದೆ. ಆ ಅವಧಿಯಲ್ಲಿ ಹಾಲಿನ ಬೂತ್, ಪತ್ರಿಕೆ ಮಾರಾಟ, ಮೆಡಿಕಲ್ಸ್, ಆಸ್ಪತ್ರೆಗಳು, 24×7 ಕೆಲಸ ಮಾಡುವ ಕಾರ್ಖಾನೆಗಳಿಗೆ ಅವಕಾಶವಿದೆ ಎಂದು ಪರಿಷ್ಕೃತ ಆದೇಶ ಸ್ಪಷ್ಟಪಡಿಸಿದೆ.

    • ಎಲ್ಲ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ತುರ್ತು ಅಗತ್ಯ ಸೇವೆಗಳು ಮತ್ತು ಕೋವಿಡ್ 19 ಕಂಟೇನ್ಮೆಂಟ್ ಮತ್ತು ನಿರ್ವಹಣೆಗೆ ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಅನುಮತಿ ಇರಲಿದೆ.
    • ಕರ್ತವ್ಯನಿರತ ಅಧಿಕಾರಿ ಹಾಗೂ ಸಿಬ್ಬಂದಿಯ ಅನಿಯಂತ್ರಿತ ಚಲನವಲನಕ್ಕೆ ಅನುಮತಿಸಲಾಗಿದೆ.
    • ತುರ್ತು ಮತ್ತು ಅಗತ್ಯ ಸೇವೆಗಳೊಂದಿಗೆ ವ್ಯವಹರಿಸುವ ಮತ್ತು 24×7 ಕಾರ್ಯಾಚರಣೆ ಅಗತ್ಯವಿರುವ ಎಲ್ಲ ಕೈಗಾರಿಕೆಗಳು/ ಕಂಪನಿಗಳು/ ಸಂಸ್ಥೆಗಳು ಕಾರ್ಯ ನಿರ್ವಹಿಸಲು ಅನುಮತಿ ಇರಲಿದೆ. ನೌಕರರು ಗುರುತಿನ ಚೀಟಿ ತೋರಿಸಿ ಸಂಚರಿಸಬಹುದು.
    • ಟೆಲಿಕಾಂ ಮತ್ತು ಇಂಟರ್‌ನೆಟ್ ಸೇವೆ ನೌಕರರು ಮತ್ತು ವಾಹನಗಳಿಗೆ ಆಯಾ ಸಂಸ್ಥೆ ನೀಡುವ ಗುರುತಿನ ಚೀಟಿ ತೋರಿಸಿ ಸಂಚರಿಸಬಹುದು. ಐಟಿ ಮತ್ತು ಐಟಿಇಎಸ್ ಕಂಪನಿಗಳು, ಸಂಸ್ಥೆಯ ಅಗತ್ಯ ಸಿಬ್ಬಂದಿ, ನೌಕರರು ಮಾತ್ರವೇ ಕಚೇರಿಯಿಂದ ಕಾರ್ಯ ನಿರ್ವಹಿಸುವುದು.
    • ರೋಗಿಗಳು ಮತ್ತು ಪರಿಚಾರಕರು/ ತುರ್ತು ಅಗತ್ಯವಿರುವ ವ್ಯಕ್ತಿಗಳು, ಲಸಿಕೆ ತೆಗೆದುಕೊಳ್ಳಲು ಉದ್ದೇಶಿಸಿರುವ ಅರ್ಹ ಜನರಿಗೆ ಕನಿಷ್ಠ ಪುರಾವೆಗಳೊಂದಿಗೆ ಸಂಚಾರಕ್ಕೆ ಅನುಮತಿಸಲಾಗಿದೆ.
    • ದೂರ ಪ್ರಯಾಣಿಸುವ ಅಂತರ್ ಜಿಲ್ಲಾ ಬಸ್‌ಗಳು, ರೈಲುಗಳು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ಇದೆ. ಸಂಪರ್ಕಿಸುವ ಸಾರ್ವಜನಿಕ ಸಾರಿಗೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಚಲನೆಗೆ ಅವಕಾಶ ನೀಡಲಾಗಿದೆ.
    • ನಿಗದಿಯಾದ ವಿವಾಹಗಳನ್ನು ಮನೆಯಲ್ಲಿ ಮಾತ್ರ 25 ಜನರ ಮಿತಿಯಲ್ಲಿ ನಡೆಸಲು ಅನುಮತಿ ಇದೆ.
    • ಗರಿಷ್ಠ 5 ಜನರ ಪರಿಮಿತಿಯೊಳಗೆ ಅಂತ್ಯಸಂಸ್ಕಾರ ಮಾಡಲು ಅನುಮತಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts