ಇಡೀ ರಾಜ್ಯ ಮತ್ತೆ ಸ್ತಬ್ಧ! ವೀಕೆಂಡ್​ ಲಾಕ್​ಡೌನ್​ಗೆ ಕ್ಷಣಗಣನೆ

Lockdown
Published on

ಬೆಂಗಳೂರು: ರಾಜ್ಯದ ಜನರೇ, ನಾಳೆ-ನಾಡಿದ್ದು ಮನೆಯಿಂದ ಹೊರಬರುವ ಮುನ್ನ ಎಚ್ಚರ! ಸುಖಾ ಸುಮ್ಮನೇ ಹೊರ ಬಂದ್ರೆ ಬೀಳುತ್ತೆ ದಂಡ.. ಕೇಸ್.. ಲಿಮಿಟ್ ಕ್ರಾಸ್ ಮಾಡಿದ್ರೆ ಜೈಲುವಾಸ ಫಿಕ್ಸ್.

ರಾಜ್ಯದಲ್ಲಿ ಕೋವಿಡ್​ ಸೋಂಕಿನ ಅಟ್ಟಹಾಸ ಹೆಚ್ಚಾಗುತ್ತಿದ್ದು, ಸಾವು-ನೋವಿನ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ವೀಕ್ ಎಂಡ್ ಲಾಕ್​ಡೌನ್ ಅಸ್ತ್ರ ಬಳಸಲು ಸಜ್ಜಾಗಿದ್ದು, ನಾಳೆಯಿಂದ ರಾಜ್ಯದಾದ್ಯಂತ ಜಾರಿ ಆಗಲಿದೆ. ಶನಿವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಕಂಪ್ಲೀಟ್ ಲಾಕ್​ಡೌನ್​ ಇರಲಿದೆ. ಈ ವೇಳೆ ಏನಿರುತ್ತೆ? ಎಂಬುದರ ಮಾಹಿತಿ ಇಲ್ಲಿದೆ. ಇದನ್ನೂ ಓದಿರಿ ಟಿಎಚ್​ಒ ಎದುರಲ್ಲೇ ಕಣ್ಣಿರೀಟ್ಟ ಕರೊನಾ ಸೇನಾನಿಗಳು

ವೀಕೆಂಡ್ ಲಾಕ್​ಡೌನ್​ ವೇಳೆ ಅಗತ್ಯ ವಸ್ತುಗಳ ಪೂರೈಕೆಗಷ್ಟೇ ಅವಕಾಶವಿದೆ. ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್ಸ್, ಹಾಲು, ದಿನಸಿ ಅಂಗಡಿ, ಹೋಟೆಲ್ (ಪಾರ್ಸಲ್ ಮಾತ್ರ), ತರಕಾರಿ, ಮಾಂಸದ ಅಂಗಡಿಗಳು ತೆರೆದಿರುತ್ತವೆ.

ರಸ್ತೆಯಲ್ಲಿ ಸಾರ್ವಜನಿಕರು ಓಡಾಡುವಂತಿಲ್ಲ. ಲಾಕ್​ಡೌನ್​ ನಿಯಮವನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ವಾಹನಗಳನ್ನ ಸೀಜ್​ ಮಾಡಿ ದಂಡ ವಸೂಲಿ ಮಾಡಲು ಆಯಾ ವಿಭಾಗದ ಡಿಸಿಪಿಗಳಿಗೆ ಸೂಚನೆ ನೀಡಲಾಗಿದೆ. ಈ ಹಿಂದೆ ಇದ್ದಂತೆಯೇ ಲಾಕ್​ಡೌನ್ ಮುಂದುವರಿಯಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net