20.4 C
Bangalore
Monday, December 9, 2019

ಮಲಗುವ ಮುಂಚೆ ಈ ಟಿಪ್ಸ್​ ಪಾಲೋ ಮಾಡಿ… ತೂಕ ಕಳೆದುಕೊಳ್ಳಿ…

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಬೆಂಗಳೂರು: ತೂಕ ಕಳೆದುಕೊಳ್ಳಲು ಸರ್ಕಸ್​ ಮಾಡುತ್ತಿದ್ದೀರಾ? ಏನೇ ಪ್ರಯತ್ನ ಮಾಡಿದರು ತೂಕ ಕಡಿಮೆಯಾಗುತ್ತಿಲ್ಲವಾ? ಹಾಗಾದರೆ ಮಲಗುವ ಮುಂಚೆ ಈ ಟಿಫ್ಸ್​ಗಳನ್ನು ಫಾಲೋ ಮಾಡಿ, ತೂಕ ಕಳೆದುಕೊಳ್ಳಿ.

1. ಪುದೀನ​ ಟೀ ಸೇವಿಸಿ
ಪ್ರತಿದಿನ ಹಾಸಿಗೆಗೆ ಹೋಗುವ ಮುಂಚೆ ಪುದೀನ ಟೀ ಕುಡಿದರೆ ತಿಂಗಳಲ್ಲಿ ಒಂದರಿಂದ ಮೂರು ಕೆ.ಜಿ.ವರೆಗೆ ತೂಕ ಕಳೆದುಕೊಳ್ಳಬಹುದು. ಹೌದು, ಬಿಸಿ ನೀರಿಗೆ ಪುದಿನ ಎಲೆಗಳನ್ನು ಹಾಕಿ ಚೆನ್ನಾಗಿ ಕುದಿಸಿ, ನಂತರ ಅದನ್ನು ಸೋಸಿ ಅದಕ್ಕೆ ಜೇನುತುಪ್ಪ ಹಾಕಿಕೊಂಡು ಕುಡಿಯಬೇಕು. ಇದನ್ನು ಒಂದು ದಿನವೂ ತಪ್ಪದೆ ಫಾಲೋ ಮಾಡಿದರೆ ನಿಮ್ಮ ದೇಹದಲ್ಲಿರುವ ಬೊಜ್ಜು ಬೇಗ ಕರಗುತ್ತದೆ.

2. ಮದ್ಯ ಸೇವಿಸಬೇಡಿ
ನಿದ್ದೆ ಮಾಡುವ ವೇಳೆ ನಮ್ಮ ದೇಹದಲ್ಲಿ ಹೆಚ್ಚು ಕ್ಯಾಲೋರಿಗಳು ಬರ್ನ್​ ಆಗುತ್ತವೆ. ಒಂದು ವೇಳೆ ನೀವು ಆಲ್ಕೊಹಾಲ್​ ಸೇವಿಸಿದರೆ ದೇಹದೊಳಗೆ ನಡೆಯುವ ಕ್ರಿಯೆಯಿಂದ ಸಂಪೂರ್ಣ ನಿದ್ದೆಯಾಗದೆ ಕ್ಯಾಲೋರಿ ಬರ್ನ್​ ಮಾಡುವ ಕ್ರಿಯೆಗೆ ಅಡ್ಡಿ ಉಂಟು ಮಾಡುತ್ತದೆ.

3. ರಾತ್ರಿ ಊಟ ಕಡಿಮೆಯಿರಲಿ
ರಾತ್ರಿ ವೇಳೆ ಹೆಚ್ಚಿನ ಪ್ರಮಾಣದಲ್ಲಿ ಊಟ ಸೇವಿಸಿದರೆ ಜೀರ್ಣಕ್ರಿಯೆಗೆ ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ನಿದ್ರೆಗೆ ಸಮಸ್ಯೆಯಾಗುತ್ತದೆ. ಹಾಗಾಗಿ ತೂಕ ಕಳೆದುಕೊಳ್ಳಲು ಇಚ್ಛಿಸುವವರು ಸಲಾಡ್​ ಅಥವಾ ಸೂಪ್​ನಂಥ ಲೈಟ್​ ಫುಡ್​ ಸೇವಿಸಬೇಕು. ಭೇಲ್​ಪುರಿ, ಗ್ರಿಲ್ಡ್​​ ತರಕಾರಿಗಳು, ಆಲೂಗಡ್ಡೆ, ಸೌತೇಕಾಯಿಯಂಥ ಕಡಿಮೆ ಕ್ಯಾಲೋರಿ ಆಹಾರವನ್ನು ಸೇವನೆ ಮಾಡಿ.

4. ರಾತ್ರಿ ಊಟವನ್ನು ತಡವಾಗಿ ಸೇವಿಸಬೇಡಿ
ಮಲಗುವ ಎರಡು ಗಂಟೆ ಮುಂಚೆ ರಾತ್ರಿ ಊಟ ಸೇವಿಸುವುದನ್ನು ಅಭ್ಯಾಸ ಮಾಡಿಕೊಳ್ಳಿ. ಊಟ ಮಾಡಿದ ತಕ್ಷಣ ನಿದ್ದೆಗೆ ಜಾರಿದರೆ ಹಾರ್ಮೋನ್​ಗಳ ವ್ಯತ್ಯಾಸವಾಗುತ್ತದೆ. ರಾತ್ರಿ ವೇಳೆ ದೇಹದಲ್ಲಿ ಚಯಾಪಚಯ ಕ್ರಿಯೆ ನಡೆಯುವುದು ಕಡಿಮೆ.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...