

ಹೆಬ್ರಿ: ವ್ಯಕ್ತಿಗಳಿಗೆ ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯ ಬಹಳ ಮುಖ್ಯ. ಆಂತರಿಕ ಸೌಂದರ್ಯ ಯಾವಾಗಲೂ ಸಮಾಜಮುಖಿಯಾಗಿರುತ್ತದೆ ಎಂದು ಜೆಸಿಐ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಹೇಳಿದರು.
ಹೆಬ್ರಿಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಮೃತ ಭಾರತಿ ಟ್ರಸ್ಟ್ ಕಾರ್ಯದರ್ಶಿ ಗುರುದಾಸ್ ಶೆಣೈ ಪ್ರಸ್ತಾವನೆಗೈದು, ಹನ್ನೆರಡು ಜನ ಸಮಾನ ಮನಸ್ಕ ಉದ್ಯಮಿಗಳು ಸೇರಿ ಸೇವಾ ಮನೋಭಾವದಿಂದ ಈ ಸಂಸ್ಥೆ ಕಟ್ಟಿದ್ದೇವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್ ಮಾತನಾಡಿ, ನಮ್ಮ ತಂದೆಯ ಕನಸಿನಂತೆ ಕಾಲೇಜು ಬೆಳೆಯುತ್ತಿರುವುದು ಖುಷಿ ಕೊಟ್ಟಿದೆ. ಮಕ್ಕಳ ಸಾಧನೆ ತ್ರಪ್ತಿ ತಂದಿದೆ ಎಂದರು. ಬಳಿಕ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಟ್ರಸ್ಟಿಗಳಾದ ಸತೀಶ್ ಪೈ, ಸುಧೀರ್ ನಾಯಕ್, ಬಾಲಕೃಷ್ಣ ಮಲ್ಯ, ಭಾಸ್ಕರ್ ಜೋಯಿಸ್, ಹಾಸ್ಟೆಲ್ ಕಮ್ಮಿಟಿಯ ಗೌರವಾಧ್ಯಕ್ಷ ಯೋಗೀಶ್ ಭಟ್, ಸದಸ್ಯ ರಾಮಕೃಷ್ಣ ಆಚಾರ್ಯ, ಪ್ರಾಂಶುಪಾಲ ಅಮರೇಶ್ ಹೆಗ್ಡೆ ಉಪಸ್ಥಿತರಿದ್ದರು. ಸಾರ್ವಜನಿಕ ಸಂಪರ್ಕಾಧಿಕಾರಿ ವಿಜಯ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ವೀಣೇಶ್ ಅಮೀನ್ ಸನ್ಮಾನಿತರ ಪಟ್ಟಿ ವಾಚಿಸಿದರು. ಉಪನ್ಯಾಸಕ ಸುಹಾಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.