More

    ಚಿಕ್ಕರಸಿನಕೆರೆ ಹಲವೆಡೆ ಸಂವಿಧಾನ ಜಾಗೃತಿ ರಥಕ್ಕೆ ಸ್ವಾಗತ

    ಕೆ.ಎಂ.ದೊಡ್ಡಿ: ಚಿಕ್ಕರಸಿನಕೆರೆ ಹೋಬಳಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ತಹಸೀಲ್ದಾರ್ ಸೋಮಶೇಖರ್ ನೇತೃತ್ವದಲ್ಲಿ ಬರಮಾಡಿಕೊಳ್ಳಲಾಯಿತು.

    ಎಸ್.ಐ ಹೊನ್ನಲಗೆರೆ ಗ್ರಾಮ ಪಂಚಾಯಿತಿಯಿಂದ ಪ್ರಾರಂಭವಾದ ಮೆರವಣಿಗೆ ತೊರೆಬೊಮ್ಮನಹಳ್ಳಿ, ಮೆಣಸಗೆರೆ, ಅಣ್ಣೂರು, ಬಿದರಹಳ್ಳಿ, ಕಾಡುಕೊತ್ತನಹಳ್ಳಿ, ಯಡಗನಹಳ್ಳಿ, ಕೆ. ಶೆಟ್ಟಹಳ್ಳಿ, ಮಾದರಹಳ್ಳಿ, ದೊಡ್ಡರಸಿನಕೆರೆ ಮತ್ತು ಭಾರತೀನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿತು.

    ಬಳಿಕ ಭಾರತೀನಗರದಲ್ಲಿ ಸೋಮವಾರ ರಾತ್ರಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ವೇಳೆ ಸರ್ಕಾರಿ ಶಾಲಾ ಮಕ್ಕಳಿಗೆ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ನಂತರ ಅಂಬೇಡ್ಕ್‌ರ್ ಕುರಿತು ಕಿರು ನಾಟಕ ಪ್ರದರ್ಶಿಸಲಾಯಿತು. ಎಸ್.ಐ.ಹೊನ್ನಲಗೆರೆ, ಅಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ರಥವನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಶಾಲಾ ಮಕ್ಕಳಿಗೆ ರಸಪ್ರಶ್ನೆ, ಪ್ರಬಂಧ, ಚರ್ಚಾ ಸ್ಪರ್ಧೆ ಏರ್ಪಡಿಸಿ ವಿಜೇರಾದವರಿಗೆ ಬಹುಮಾನ ವಿತರಿಸಲಾಯಿತು.

    ಮಕ್ಕಳ ರಾಷ್ಟ್ರ ನಾಯಕರ ವೇಷಭೂಷಣ ಗಮನ ಸೆಳೆಯಿತು. ಭಾರತೀನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳು ದೇಶಭಕ್ತಿ ಗೀತೆಗೆ ನೃತ್ಯ ಮಾಡಿದರು. ಕಾಡುಕೊತ್ತನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೈಕ್ ಜಾಥಾ ಮೂಲಕ ಸಂವಿಧಾನ ಜಾಗೃತಿ ರಥವನ್ನು ಸ್ವಾಗತಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts