More

    ಸಂವಿಧಾನ ಜಾಗೃತಿ ಜಾಥಾಕ್ಕೆ ಸ್ವಾಗತ

    ಗೋಣಿಕೊಪ್ಪ: ಗೋಣಿಕೊಪ್ಪಲಿನ ಉಮಾಮಹೇಶ್ವರಿ ದೇವಾಲಯದ ಆವರಣದಲ್ಲಿ ಬುಧವಾರ ಸಂವಿಧಾನ ಜಾಗೃತಿ ಜಾಥಾವನ್ನು ಗ್ರಾಮಪಂಚಾಯಿತಿ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

    ಗೋಣಿಕೊಪ್ಪ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷೆ ಎಂ.ಮಂಜುಳಾ, ಪಿಡಿಒ ತಿಮ್ಮಯ್ಯ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

    ಸಂಜೀವಿನಿ ಸ್ತ್ರೀ ಶಕ್ತಿ ಒಕ್ಕೂಟದ ಮಹಿಳಾ ಸದಸ್ಯರು ಕಳಸ ಹಿಡಿದು ಜಾಥಾದೊಂದಿಗೆ ಹೆಜ್ಜೆ ಹಾಕಿದರು. ಕಾವೇರಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳು, ಗೋಣಿಕೊಪ್ಪ ಅನುದಾನಿತ, ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಅಂಬೇಡ್ಕರ್ ಬಗ್ಗೆ ಘೋಷಣೆ ಕೂಗುತ್ತ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿದರು. ಶಾಲಾ ವಿದ್ಯಾರ್ಥಿಗಳ ಬ್ಯಾಂಡ್‌ಸೆಟ್ ಹಾಗೂ ನಾಗರಹೊಳೆ ಜೇನು ಕುರುಬರ ಜಾನಪದ ನೃತ್ಯಗಳು ಗಮನ ಸೆಳೆದವು. ಯುವಸಮೂಹದಿಂದ ಬೈಕ್ ಜಾಥಾ ನಡೆಸಲಾಯಿತು.

    ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಸಭಾ ಕಾರ್ಯಕ್ರಮವನ್ನು ಗೋಣಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಪ್ರಮೋದ್ ಗಣಪತಿ ಉದ್ಘಾಟಿಸಿದರು. ಗೋಣಿಕೊಪ್ಪ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಎಚ್.ಕೆ.ಕುಮಾರ್ ಮಾತನಾಡಿ, ಸಂವಿಧಾನದ ಆಶಯದಂತೆ ಎಲ್ಲರೂ ಮುನ್ನಡೆಯಬೇಕು. ಭಾರತದ ಸಂವಿಧಾನ ಪ್ರಪಂಚದಲ್ಲೇ ಶ್ರೇಷ್ಠತೆಯನ್ನು ಹೊಂದಿದೆ. ಅಂಬೇಡ್ಕರ್ ಅವರ ಜೀವನ ಮೌಲ್ಯ ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು.

    ಗಿರಿಜನ ತಾಲೂಕು ಕಲ್ಯಾಣಾಧಿಕಾರಿ ನವೀನ್, ಗ್ರಾ.ಪಂ ಉಪಾಧ್ಯಕ್ಷೆ ಎಂ.ಮಂಜುಳಾ, ಪ್ರೌಢಶಾಲಾ ಮುಖ್ಯಶಿಕ್ಷಕ ಮಹೇಶ್, ಪಿಡಿಒ ತಿಮ್ಮಯ್ಯ, ದಸಂಸ ಮುಖಂಡ ಟಿ.ಎನ್.ಗೋವಿಂದಪ್ಪ ಸೇರಿದಂತೆ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts