More

    ಸಂವಿಧಾನದಲ್ಲಿ ಸರ್ವರಿಗೂ ಸಮಾನ ಅವಕಾಶ

    ಭಾಲ್ಕಿ: ಭಾರತ ಸಂವಿಧಾನದ ೭೫ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾ ರಥವನ್ನು ಮಂಗಳವಾರ ಪಟ್ಟಣಕ್ಕೆ ಆಗಮಿಸಿತು.

    ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ನ ಅಧ್ಯಕ್ಷ ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಸಂವಿಧಾನ ಜಾಗೃತಿ ಜಾಥಾ ರಥವನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಲಾಯಿತು.

    ಪೂಜ್ಯರು ಮಾತನಾಡಿ, ಭಾರತ ಸಂವಿಧಾನ ಅಂಗೀಕಾರಗೊಂಡು ೭೫ನೇ ವರ್ಷಾಚರಣೆ ಸಂಭ್ರಮದಲ್ಲಿದ್ದೇವೆ. ಈ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ಸಂವಿಧಾನ ಜಾಗೃತಿ ಜಾಥಾ ಸಂಚರಿಸಿ, ಜನರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ, ಮಹತ್ವವನ್ನು ತಿಳಿ ಹೇಳುವ ಪ್ರಯತ್ನ ಮಾಡಲಾಗುತ್ತಿದೆ. ಭಾರತ ಸಂವಿಧಾನದಲ್ಲಿ ಎಲ್ಲವನ್ನು ಒಳಗೊಂಡಿದೆ. ಸರ್ವರ ಹಿತ ಸಂವಿಧಾನದಲ್ಲಿದೆ. ಸಂವಿಧಾನದಲ್ಲಿ ಸರ್ವರಿಗೂ ಸಮಾನ ಅವಕಾಶ ಕಲ್ಪಿಸಿದ ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ಎಲ್ಲರೂ ನಡೆದುಕೊಳ್ಳಬೇಕು ಎಂದು ತಿಳಿಸಿದರು.

    ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ, ಜಾಥಾದ ನೋಡಲ್ ಅಧಿಕಾರಿ ಪ್ರೇಮಸಾಗರ ದಾಂಡೇಕರ, ತಾಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸತೀಶ ಸಂಗನ, ಪುರಸಭೆ ಮುಖ್ಯಾಧಿಕಾರಿ ನಾಗಣ್ಣ ಪರೀಟ್, ಬಿಸಿಎಂ ವಿಸ್ತೀರ್ಣಾಧಿಕಾರಿ ವಿಜಯಮಾಲಾ ವಗ್ಗೆ, ಸಿಡಿಪಿಒ ಶ್ರೀನಿವಾಸ ಬಾಳವಾಲೆ, ಸಂತೋಷ ಬಿಜಿ ಪಾಟೀಲ್, ದಲಿತ ಸಮುದಾಯದ ಮುಖಂಡ ಪ್ರವೀಣ ಮೋರೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts