23.2 C
Bangalore
Saturday, December 14, 2019

ಕೀಳರಿಮೆಯಿಂದ ಹೊರಬರಲಿ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಹುಬ್ಬಳ್ಳಿ: 25 ವರ್ಷಗಳ ಹಿಂದೆ ಹೆಣ್ಣು ಮಗು ಎಂದರೆ ಸಮಾಜದಲ್ಲಿ ಜಿಗುಪ್ಸೆ ಇತ್ತು. ಆದರೆ, ಈಗ ಕಾಲ ಬದಲಾಗಿದೆ. ಶಾಲೆ- ಕಾಲೇಜ್​ಗಳಲ್ಲಿ ಹೆಣ್ಣು ಮಕ್ಕಳ ಸಾಧನೆ ದೊಡ್ಡ ಮಟ್ಟದಲ್ಲಿ ಇರುತ್ತದೆ ಎಂದು ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಹೇಳಿದರು.

ಮಹಿಳಾ ಸಾಕ್ಷರತೆ ಹೆಚ್ಚಳ ಹಾಗೂ ಬಾಲಕಿಯರ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸಲು ಅಭಿಯಾನ ನಡೆಸುತ್ತಿರುವ ಅಂತಾರಾಷ್ಟ್ರೀಯ ಸ್ಕೇಟಿಂಗ್ ಪಟು ರಾಣಾ ಉಪ್ಪಲ್​ಪಟಿ ಅವರು ಭಾನುವಾರ ಹುಬ್ಬಳ್ಳಿ ತಲುಪಿದ ಸಂದರ್ಭದಲ್ಲಿ ವಿದ್ಯಾನಗರದ ದೇಶಪಾಂಡೆ ಫೌಂಡೇಷನ್ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ಸ್ವಾಗತ ಸಮಾರಂಭದಲ್ಲಿ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಭಾರತದಂತಹ ಅಭಿವೃದ್ಧಿ ಹೊಂದುತ್ತಿರುವ ದೇಶದಲ್ಲಿ ಬದಲಾವಣೆ ತರುವುದು ಕಷ್ಟದ ಕೆಲಸ. ಹೆಣ್ಣು ಮಕ್ಕಳು ಕೀಳರಿಮೆಯಿಂದ ಹೊರಬರಬೇಕು. ಪಠ್ಯೇತರ ಚಟುವಟಿಕೆ ಗಳಲ್ಲೂ ಪಾಲ್ಗೊಳ್ಳಬೇಕು. ಯಾವುದೇ ಕೆಲಸವಾಗಲಿ ಶ್ರದ್ಧೆಯಿಂದ ಮಾಡಬೇಕು ಎಂದು ಸಲಹೆ ನೀಡಿದರು.

ಹುಬ್ಬಳ್ಳಿಯ ಟೈಟನ್ ಫ್ರಾಂಚೈಸಿ, ಡೀಲರ್ಸ್ ಇತರರು ಸಂಗ್ರಹಿಸಿದ ನಾಲ್ಕು ಲಕ್ಷ ರೂ. ಚೆಕ್ ಅನ್ನು ಇದೇ ಸಂದರ್ಭದಲ್ಲಿ ಅಭಿಯಾನಕ್ಕೆ ನೀಡಲಾಯಿತು.

ವಿಜೇತರಿಗೆ ಬಹುಮಾನ: ಅಭಿಯಾನದ ಅಂಗವಾಗಿ ಆಯೋಜಿಸಲಾಗಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಿಶೇಷವಾಗಿ ಮೆಗಾ ಬಹುಮಾನ ಪಡೆದ ಧಾರವಾಡದ ಮಾಳವಿಕಾ ಕುಲಕರ್ಣಿಗೆ ಸೈಕಲ್ ಅನ್ನು ಬಹುಮಾನವಾಗಿ ನೀಡಲಾಯಿತು. ಎರಡನೇ ಬಹುಮಾನ ಆಕಾಶ ವಿ.ಕೆ., ಮೂರನೇ ಬಹುಮಾನ ಪ್ರಶಾಂತ ರಾಯ್ಕರ್ ಪಡೆದರು.

ಈ ಅಭಿಯಾನಕ್ಕೆ ಮುಂಬೈನ ಕೆ.ಸಿ. ಮಹೀಂದ್ರಾ ಎಜುಕೇಶನ್ ಟ್ರಸ್ಟ್, ದೆಹಲಿಯ ಐಐಎಂ ಪ್ಯಾಕ್ಟ್ ಸೇರಿ ಹಲವು ಸಂಘಟನೆಗಳು ಕೈಜೋಡಿಸಿವೆ. ಧಿರೇನ್ ಠಕ್ಕರ್, ವೀರೇಂದ್ರ ಕೌಜಲಗಿ, ರೋಹಿತ ನಾಗೋನಕರ್, ಇತರರು ಇದ್ದರು.

140 ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು: ಒಂದು ಮಗುವಿಗೆ ಶಿಕ್ಷಣ ನೀಡಲು ಒಂದು ವರ್ಷಕ್ಕೆ 3600 ರೂ. ವೆಚ್ಚವಾಗುತ್ತದೆ. ಸುಮಾರು 25 ಸಾವಿರ ಹೆಣ್ಣು ಮಕ್ಕಳಿಗೆ ಈ ಸೌಲಭ್ಯ ನೀಡಲು ಹಣ ಸಂಗ್ರಹಣೆಯೂ ಅಭಿಯಾನದಲ್ಲಿ ನಡೆಯುತ್ತಿದೆ.

ವಿಆರ್​ಎಲ್ ಸಮೂಹ ಸಂಸ್ಥೆಯ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರು 140 ವಿದ್ಯಾರ್ಥಿಗಳ ಶಿಕ್ಷಣಕ್ಕೆ (5 ಲಕ್ಷ ರೂ.) ನೆರವು ನೀಡಲು ಮುಂದಾಗಿದ್ದಾರೆ ಎಂದು ಸ್ಕೇಟರ್ ರಾಣಾ ಉಪ್ಪಲ್​ಪಟಿ ತಿಳಿಸಿದರು.

90 ದಿನದ ಟೈಟನ್ ಇಕೋ ಅಭಿಯಾನ: ಮಹಿಳಾ ಸಾಕ್ಷರತೆ ಹೆಚ್ಚಳ ಹಾಗೂ ಬಾಲಕಿಯರ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸಲು ಅಂತಾರಾಷ್ಟ್ರೀಯ ಸ್ಕೇಟಿಂಗ್ ಪಟು ರಾಣಾ ಉಪ್ಪಲ್​ಪಟಿ ಅವರು ಕೈಗೊಂಡಿರುವ 90 ದಿನದ ಅಭಿಯಾನ ಹುಬ್ಬಳ್ಳಿಗೆ ಭಾನುವಾರ ಆಗಮಿಸಿದಾಗ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.

ಇಲ್ಲಿಯ ವಿದ್ಯಾನಗರದ ದೇಶಪಾಂಡೆ ಫೌಂಡೇಷನ್​ನಲ್ಲಿ ನೂರಾರು ಸ್ಕೇಟರ್​ಗಳು, ಸಾರ್ವಜನಿಕರು ಅವರನ್ನು ಸ್ವಾಗತಿಸಿದರು. ಟೈಟನ್ ಕಂಪನಿ ಟಾಟಾ ಸಮೂಹದ ಸಹಯೋಗದಲ್ಲಿ ಸೆ. 5ರಿಂದ ಬೆಂಗಳೂರು ಬಳಿಯ ಹೊಸೂರನಿಂದ ಆರಂಭವಾಗಿರುವ ಸ್ಕೇಟಿಂಗ್ ದೇಶಾದ್ಯಂತ 6000 ಕಿ.ಮೀ. ಸಂಚರಿಸಲಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಟೈಟನ್ ಸಂಸ್ಥೆಯ ಕಾರ್ಪೆರೇಟ್ ಸಸ್ಟನೇಬಲಿಟಿ ಮುಖ್ಯಸ್ಥ ಎನ್.ಇ. ಶ್ರೀಧರ, ಕೆಳ ವರ್ಗದ 25 ಸಾವಿರ ಬಾಲಕಿಯರ ಶೈಕ್ಷಣಿಕ ಅಗತ್ಯಗಳಿಗೆ ಹಣ ಸಂಗ್ರಹಣೆ, ಸುಮಾರು 6 ಲಕ್ಷ ಮಕ್ಕಳಿಗೆ ಸುರಕ್ಷತೆ (ಗುಡ್ ಟಚ್- ಬ್ಯಾಡ್ ಟಚ್) ಬಗ್ಗೆ ತಿಳಿವಳಿಕೆ ನೀಡುವ ಉದ್ದೇಶದಿಂದ ಇಕೋ (ಎಜ್ಯುಕೇಶನ್ ಟು ಕ್ಯಾರಿ ಹರ್ಆ ನ್​ವರ್ಡ್ಸ್) ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಟೈಟನ್ ಉದ್ಯಮ ಸಹವರ್ತಿಯೂ ಆದ ರಾಣಾ ಉಪ್ಪಲ್​ಪಟಿ ಮಾತನಾಡಿ, ದೇಶದ ಗ್ರಾಮೀಣ ಭಾಗದಲ್ಲಿ ಮಹಿಳಾ ಸಾಕ್ಷರತೆ ಶೇ. 40ರ ಆಸುಪಾಸಿನಲ್ಲಿದೆ. ಸರ್ಕಾರಗಳು ಉಚಿತ ಶಿಕ್ಷಣ ಎಂದು ಹೇಳುತ್ತಿದ್ದರೂ ಅದು ಅನೇಕ ಹೆಣ್ಣು ಮಕ್ಕಳಿಗೆ ತಲುಪುತ್ತಿಲ್ಲ. ಸಾಕ್ಷರತೆ ಹೆಚ್ಚಿಸಬೇಕಾಗಿದೆ. ಅದಕ್ಕಾಗಿ ಕಂಪನಿ ಜೊತೆ ಸೇರಿ ಇಂತಹ ಉತ್ತಮ ಸಾಮಾಜಿಕ ಸೇವಾ ಕಾರ್ಯ ಮಾಡಲು ಹೆಮ್ಮೆ ಎನಿಸುತ್ತದೆ. ಬಾಲಕಿಯರ ಶಿಕ್ಷಣದ ಕಾಳಜಿ ಈ ಅಭಿಯಾನದಲ್ಲಿದೆ. ಅಲ್ಲದೆ ಸುರಕ್ಷತೆ ಬಗ್ಗೆ ಜಾಗೃತಿ ಕೂಡ ಮೂಡಿಸಲಾಗುತ್ತದೆ ಎಂದರು.

ರಾಣಾ ಬೇಸರ: ಸ್ಕೇಟಿಂಗ್ ರಸ್ತೆಗಳಲ್ಲಿ ಮಾಡುವಂತಹದ್ದಲ್ಲ. ಆದರೆ, ಒಂದು ಒಳ್ಳೆಯ ಕಾರ್ಯಕ್ಕಾಗಿ ಈ ಅಭಿಯಾನಕ್ಕೆ ಕೈ ಜೋಡಿಸಿದ್ದೇನೆ. ಉತ್ತಮ ರಸ್ತೆ ಇದ್ದರೆ ಸಮಸ್ಯೆ ಇಲ್ಲ. ಹುಬ್ಬಳ್ಳಿಯಲ್ಲಿ ಸರಿಯಾದ ರಸ್ತೆ ಇರದ ಕಾರಣ ಒಂದಿಷ್ಟು ವಿಳಂಬ ವಾಯಿತು ಎಂದು ರಾಣಾ ಉಪ್ಪಲ್​ಪಟಿ ವಿಷಾದ ವ್ಯಕ್ತಪಡಿಸಿದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...