More

    ಕನ್ನಡಕ್ಕೆ ಕಲ್ಯಾಣದ ಕೊಡುಗೆ ಅಪಾರ

    ಸೇಡಂ: ಅತ್ಯಂತ ಶ್ರೀಮಂತಿಕೆಯಿAದ ಕೂಡಿರುವ ಕನ್ನಡ ಭಾಷೆಗೆ ಕಲ್ಯಾಣ ಭಾಗದ ಕೊಡುಗೆ ಅಪಾರವಾಗಿದೆ ಎಂದು ಸಹಾಯಕ ಆಯುಕ್ತ ಆಶಪ್ಪ ಪೂಜಾರಿ ಬಣ್ಣಿಸಿದರು.

    ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಬುಧವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ಭಾಗದಲ್ಲಿ ಅನೇಕ ರಾಜ ಮನೆತನಗಳು ಆಳ್ವಿಕೆ ನಡೆಸಿವೆ. ಅದರಲ್ಲೂ ಕನ್ನಡಕ್ಕೆ ಮೊಟ್ಟ ಮೊದಲ ಗ್ರಂಥ ಕವಿರಾಜ ಮಾರ್ಗ ನೀಡಿದ ರಾಷ್ಟçಕೂಟರ ನೆಲದಲ್ಲಿ ನಾವಿರುವುದು ನಮ್ಮ ಸೌಭಾಗ್ಯ. ಅನೇಕ ಜನ ಕವಿ, ಸಾಹಿತಿಗಳು ನಾಡಿನ ಬಗ್ಗೆ ಅಭಿಮಾನ ಮೂಡಿಸುವ ಹತ್ತಾರು ಗೀತೆಗಳನ್ನು ಹಾಡಿದ್ದಾರೆ. ಆ ಹಾಡುಗಳನ್ನು ಕೇಳಿದರೆ ಕನ್ನಡದ ಗತವೈಭವ ಅರ್ಥವಾಗುತ್ತದೆ ಎಂದರು.

    ತಹಸೀಲ್ದಾರ್ ಶ್ರೀಯಾಂಕ ಧನಶ್ರೀ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಗುಂಡೇರಾವ ಮುಡಬಿ ವಿಶೇಷ ಉಪನ್ಯಾಸ ನೀಡಿದರು. ಕಸಾಪ ತಾಲೂಕು ಅಧ್ಯಕ್ಷೆ ಸುಮಾ ಚಿಮ್ಮನಚೋಡಕರ್ ಮಾತನಾಡಿದರು. ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿವಶಂಕ್ರಯ್ಯಸ್ವಾಮಿ ಇಮಡಾಪುರ, ತಾಪಂ ಇಒ ಚನ್ನಪ್ಪ ರಾಯಣ್ಣವರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರಾತಿ, ಪುರಸಭೆ ಮುಖ್ಯಾಧಿಕಾರಿ ಬಿ.ಪ್ರಹ್ಲಾದ್ ಇದ್ದರು. ದೈಹಿಕ ಶಿಕ್ಷಣಾಧಿಕಾರಿ ಎಸ್.ಎ.ಮುನಾಫ್ ಸ್ವಾಗತಿಸಿ, ನಿರೂಪಣೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts