20.5 C
Bangalore
Sunday, December 15, 2019

ಜ್ವಲಂತ ಸಮಸ್ಯೆಗಳಿಗೆ ಕಲ್ಯಾಣವೇ ಪರಿಹಾರ

Latest News

ಅಡುಗೆಗೆ ಗುಣಮಟ್ಟದ ಪದಾರ್ಥ ಬಳಸಿ

ಕೊಪ್ಪ: ಅಡುಗೆ ಮಾಡುವಾಗ ಸ್ವಚ್ಛತೆಗೆ ಗಮನ ಹರಿಸಬೇಕು. ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಹೆಚ್ಚು ಜವಾಬ್ದಾರಿಯಿಂದ ಅಡುಗೆ ಮಾಡಬೇಕು ಎಂದು ಅಕ್ಷರ...

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ರಾಮಾಯಣ, ಮಹಾಭಾರತ, ಭಾಗವತಗಳೇ ಮೂಲಾಧಾರ: ಶ್ರೀ ರಾಘವೇಶ್ವರ ಸ್ವಾಮೀಜಿ

ಬೆಂಗಳೂರು: ರಾಮಾಯಣ ಮಹಾಕಾವ್ಯ ಕಲ್ಪನೆಯಲ್ಲ, ಅದು ಇತಿಹಾಸ. ರಾಮಾಯಣ, ಮಹಾಭಾರತ ಹಾಗೂ ಭಾಗವತ ನಮ್ಮ ಭರತ ಸಂಸ್ಕೃತಿಯ ಮೂಲಾಧಾರ. ಈ ಮೂರನ್ನು ಮೂಲವಾಗಿಟ್ಟುಕೊಂಡು ವಿಷ್ಣುಗುಪ್ತ ವಿಶ್ವವಿದ್ಯಾಪೀಠ...

ರೇವಣ್ಣರಿಂದ ಕಲಿಯುವುದು ಮುಗಿದಿದೆ

ಹಾಸನ ಜಿಲ್ಲೆಯನ್ನಷ್ಟೇ ನೋಡಿಕೊಳ್ಳಲಿ ಶಾಸಕ ಕೆ.ಸಿ.ನಾರಾಯಣಗೌಡ ವಾಗ್ದಾಳಿ ಕೆ.ಆರ್.ಪೇಟೆ: ಮಾಜಿ ಸಚಿವ ಎಚ್.ಡಿ.ರೇವಣ್ಣ ನಮ್ಮ ಜಿಲ್ಲೆ, ತಾಲೂಕು ನೋಡುವ ಅವಶ್ಯಕತೆ ಇಲ್ಲ. ಹಾಸನ ಜಿಲ್ಲೆಯನ್ನಷ್ಟೇ...

ಜೆಡಿಎಸ್‌ಗೆ ನಾರಾಯಣಗೌಡ ಯಾವ ಲೆಕ್ಕ!

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿರುಗೇಟು ಪಾಂಡವಪುರ: ಮಾಜಿ ಪ್ರಧಾನಿ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಮತ್ತವರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಿ ಎಚ್ಚರಿಕೆ ನೀಡಿದವರೆಲ್ಲ ಮಣ್ಣಲ್ಲಿ ಮಣ್ಣಾಗಿ...

ಪಾನಮತ್ತ ಚಾಲಕರಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಪೊಲೀಸರ ಅಮಾನತು

ಬೆಂಗಳೂರು: ಪಾನಮತ್ತ ಚಾಲಕರಿಂದ ಕಾನೂನು ಬಾಹಿರವಾಗಿ ಹಣ ವಸೂಲಿ ಮಾಡುತ್ತಿದ್ದ ಅಶೋಕ್ ನಗರ ಸಂಚಾರ ಠಾಣೆಯ ನಾಲ್ವರು ಪೊಲೀಸರನ್ನು ಅಮಾನತು ಮಾಡಿ ಜಂಟಿ ಪೊಲೀಸ್ ಆಯುಕ್ತ...

ಹುಣಸೂರು: ಬಸವಣ್ಣನವರ ಕಲ್ಯಾಣದಲ್ಲಿ ಸಮಾನತೆ, ಸ್ತ್ರೀ ಸಂವೇದನೆ, ಸಬಲೀಕರಣ ಹಾಗೂ ಮಾನವೀಯತೆ ನೆಲವೀಡಾಗಿತ್ತು. ಆದರೆ, ಆಧುನಿಕತೆಯ ಭರಾಟೆಯಲ್ಲಿ ನಾವು ಅವೆಲ್ಲವನ್ನೂ ಕಳೆದುಕೊಂಡಿದ್ದೇವೆ ಎಂದು ಸಹಮತ ವೇದಿಕೆಯ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರಸನ್ನಕುಮಾರ್ ಕೆರೆಗೋಡು ಹೇಳಿದರು.

ಶುಕ್ರವಾರ ಪಟ್ಟಣಕ್ಕೆ ಆಗಮಿಸಿದ ‘ಮತ್ತೆ ಕಲ್ಯಾಣ’ ರಥಕ್ಕೆ ಸರ್ಕಾರಿ ಮಹಿಳಾ ಪದವಿ ಕಾಲೇಜು ಆವರಣದಲ್ಲಿ ಭವ್ಯ ಸ್ವಾಗತ ನೀಡಿದ ಸಂದರ್ಭ ಮಾತನಾಡಿದ ಅವರು, ಕಲ್ಯಾಣದಲ್ಲಿ ರಾಜಾಶ್ರಯವಿದ್ದರೂ ರಾಜಪ್ರಭುತ್ವಕ್ಕೆ ಹೆಚ್ಚಿನ ಮಾನ್ಯತೆ ಇರಲಿಲ್ಲ. ಪ್ರಸ್ತುತ ಪ್ರಜಾಪ್ರಭುತ್ವವಿದ್ದರೂ ಸಮಾಧಾನವಿಲ್ಲ. ಯುವಜನರನ್ನು ಈ ದೇಶದ ಆಸ್ತಿಯೆಂದು ಭಾವಿಸಿಲ್ಲ ಎಂದರು.

ದೇಶದ ಈಗಿನ ಜ್ವಲಂತ ಸಮಸ್ಯೆಗಳಿಗೆ ಬಸವಣ್ಣನವರ ಕಲ್ಯಾಣವೇ ಪರಿಹಾರವೆಂಬ ನಂಬಿಕೆಯಿಂದ ‘ಮತ್ತೆ ಕಲ್ಯಾಣ’ ಶೀರ್ಷಿಕೆಯಡಿ ರಾಜ್ಯಾದ್ಯಂತ ಆಂದೋಲನ ನಡೆದಿದೆ ಎಂದು ತಿಳಿಸಿದರು.

ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮಾತ್ರವಲ್ಲದೆ, ಜೇಡರ ದಾಸಿಮಯ್ಯ, ಅಂಬಿಗರ ಚೌಡಯ್ಯ ಸೇರಿದಂತೆ ತಳ ಸಮುದಾಯದ 28ಕ್ಕೂ ಹೆಚ್ಚು ಶರಣರೂ ವಚನಗಳನ್ನು ರಚಿಸಿದ್ದು, ಈ ವೇದಿಕೆಯ ಮೂಲಕ ಅವರ ವಚನಗಳ ಗಾಯನ ನಡೆಯಲಿದೆ ಎಂದು ಹೇಳಿದರು.

ಮೈಸೂರಿನ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಶಂಕರ್ ಮಾತನಾಡಿ, ವಚನ ಸಾಹಿತ್ಯದಿಂದ ಮನ ಪರಿವರ್ತನೆ ಸಾಧ್ಯವೆಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸುವ ನಿಟ್ಟಿನಲ್ಲಿ ಆಂದೋಲನ ನಡೆದಿದೆ ಎಂದರು.
ಸಹಮತ ವೇದಿಕೆ ವತಿಯಿಂದ ಖ್ಯಾತ ಸುಗಮ ಸಂಗೀತ ಗಾಯಕ ದೇವಾನಂದ ವರಪ್ರಸಾದ್ ಮತ್ತವರ ತಂಡ ವಚನಗಳ ಗಾಯನದ ಮೂಲಕ ವಿದ್ಯಾರ್ಥಿಗಳ ಮನಗೆದ್ದರು.

ಪ್ರಾಂಶುಪಾಲ ಜ್ಞಾನಪ್ರಕಾಶ್, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕೆ.ಎಸ್.ಭಾಸ್ಕರ್, ಸಹಾಯಕ ಪ್ರಾಧ್ಯಾಪಕ ಡಾ.ಬಿ.ಎಂ.ನಾಗರಾಜು, ಸಿಡಿಸಿ ಉಪಾಧ್ಯಕ್ಷೆ ಸುನೀತಾ ಜಯರಾಮೇಗೌಡ, ಸಂತ ಜೋಸೆಫರ ಪದವಿ ಕಾಲೇಜು, ಜ್ಞಾನಧಾರ ಪದವಿ ಕಾಲೇಜು, ಡಿ.ದೇವರಾಜ ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹನಗೋಡು ಮತ್ತು ಬಿಳಿಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ರಥ ಸಂಚರಿಸಿತು.

Stay connected

278,756FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...