ರಾಜೀನಾಮೆ ಕೊಡಲು ಬಯಸಿರುವುದಾಗಿ ಖುದ್ದಾಗಿ ಅತೃಪ್ತ ಶಾಸಕರು ಹೇಳಿದ ಮೇಲೆ ಮತ್ತಿನ್ನೇನು ಪರಿಶೀಲನೆ ಆಗಬೇಕು…?

ನವದೆಹಲಿ: ಕರ್ನಾಟಕದ ಅತೃಪ್ತ ಶಾಸಕರು ತಮ್ಮ ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸುವಂತೆ ಕೋರಿ ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ಇನ್ನು ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದೆ. ಈ ವಿಷಯವಾಗಿ ಸುಪ್ರೀಂಕೋರ್ಟ್​ನ ನಿಲುವು ಏನಾಗಿರಲಿದೆ ಎಂಬ ಕುತೂಹಲ ಎಲ್ಲೆಡೆ ಮನೆಮಾಡಿದೆ.

ಈ ಮಧ್ಯೆ, ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿರುವ ಅತೃಪ್ತ ಶಾಸಕರ ಪರ ವಕೀಲ ಮುಕುಲ್​ ರೋಹಟಗಿ, ಸುಪ್ರೀಂಕೋರ್ಟ್​ ನಿರ್ದೇಶನದ ಮೇರೆಗೆ ಅತೃಪ್ತ ಶಾಸಕರು ಗುರುವಾರ ಸಂಜೆ 6 ಗಂಟೆಯೊಳಗೆ ಸ್ಪೀಕರ್​ ಕೆ.ಆರ್​. ರಮೇಶ್​ಕುಮಾರ್​ ಎದುರು ಖುದ್ದಾಗಿ ಹಾಜರಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ತಾವು ಶಾಸಕ ಸ್ಥಾನ ತೊರೆಯಲು ಬಯಸಿರುವುದಾಗಿ ಹೇಳಿದ್ದಾರೆ. ಹೀಗಿರುವಾಗ ಸ್ಪೀಕರ್​ಗೆ ಪರಿಶೀಲಿಸಲು ಇನ್ನೇನು ಬಾಕಿಯಿದೆ ಎಂದು ಪ್ರಶ್ನಿಸಿದ್ದಾರೆ.

ಈ ಎಲ್ಲ ಹಿನ್ನೆಲೆಯಲ್ಲಿ ಶುಕ್ರವಾರದ ವಿಚಾರಣೆಯಲ್ಲಿ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸುವ ಕುರಿತು ವಿಧಾನಸಭಾಧ್ಯಕ್ಷರು ಕೂಡಲೇ ನಿರ್ಧಾರ ಕೈಗೊಳ್ಳುವಂತೆ ಸೂಚಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್​ನಲ್ಲಿ ವಾದಿಸುವುದಾಗಿ ತಿಳಿಸಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *