25.5 C
Bangalore
Monday, December 16, 2019

ಬಾವಿಗೆ ಮರುಜೀವ ನೀಡಿದ ರೋಟರಿ

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

<ಪೊದೆಯಿಂದ ಆವೃತ್ತವಾಗಿದ್ದ ತೆರೆದ ಬಾವಿ ರೋಟರಿಯಿಂದ ಶುಚಿತ್ವ> 

- Advertisement -

ಹರಿಪ್ರಸಾದ್ ನಂದಳಿಕೆ, ಬೆಳ್ಮಣ್

ವರ್ಷಗಳ ಹಿಂದೆ ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಿಸಿದ ಬಾವಿಹುಲ್ಲು ಪೊದೆಗಳಿಂದ ಆವೃತ್ತಗೊಂಡಿದ್ದು ಉಪಯೋಗವಿಲ್ಲದೆ ಪಾಳು ಬಿದ್ದಿತ್ತು. ಬಾವಿ ಬಗ್ಗೆ ವಿಜಯವಾಣಿ ಸಮಗ್ರ ವರದಿ ಪ್ರಕಟಿಸಿದ್ದು, ಕೂಡಲೇ ಎಚ್ಚೆತ್ತ ಜನಪರ ಸೇವೆ ನಿರತ ಬೆಳ್ಮಣ್‌ನ ರೋಟರಿ ಸಂಸ್ಥೆ ಬಾವಿಗೆ ಹೊಸ ಸ್ವರೂಪ ನೀಡಿದೆ.

ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಪಂ ವ್ಯಾಪ್ತಿಯ ರಾಜ್ಯ ಹೆದ್ದಾರಿಗೆ ತಾಗಿಕೊಂಡಿರುವ ಈ ಬಾವಿ ಹುಲ್ಲು ಪೊದೆಗಳಿಂದ ಆವೃತ್ತಗೊಂಡಿದ್ದು, ಸಾರ್ವಜನಿಕರ ಉಪಯೋಗಕ್ಕೆ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿತ್ತು. ಪ್ರಸ್ತುತ ಹುಲ್ಲು ಪೊದೆ ತೆರವು ಮಾಡಿ ಬಾವಿ ಶುಚಿಗೊಳಿಸಿ ಬಣ್ಣ ಬಳಿದು ಸುಂದರವಾಗಿಸಿದ್ದಾರೆ. ನೀರಿನ ಮಟ್ಟವೂ ಇರುವ ಕಾರಣ ಮುಂದಿನ ದಿನದಲ್ಲಿ ನೀರನ್ನು ಶುದ್ಧೀಕರಿಸಿ ಸಾರ್ವಜನಿಕರ ಉಪಯೋಗಕ್ಕೆ ಹಾಗೂ ಸಮೀಪದಲ್ಲೇ ನಿರ್ಮಾಣಗೊಂಡ ಸಾರ್ವಜನಿಕ ಪಾರ್ಕಿಂಗ್ ವ್ಯವಸ್ಥೆಗೆ ಸದ್ಬಳಕೆ ಮಾಡಿಕೊಳ್ಳುವ ಯೋಜನೆಯನ್ನು ಗ್ರಾಪಂ ಹಾಗೂ ರೋಟರಿ ಸಂಸ್ಥೆ ಹಮ್ಮಿಕೊಂಡಿದೆ.

ಈ ಭಾಗದ ಒಂದಿಷ್ಟು ಮನೆಗಳಿಗೆ ಕುಡಿಯುವ ನೀರು ಪೂರೈಸಲು ಚಿಂತನೆ ನಡೆದಿದೆ. ಹೊಸ ಬಾವಿ ನಿರ್ಮಿಸುವುದಾದರೆ ಲಕ್ಷಾಂತರ ರೂ. ವೆಚ್ಚ ಮಾಡಬೇಕಾಗುತ್ತದೆ. ಆದರೆ ಇಲ್ಲಿ ಪಾಳು ಬಿದ್ದಿದ್ದ ಈ ಹಳೆಯ ಬಾವಿಗೆ ಮರು ಜೀವ ನೀಡಿದ ರೋಟರಿ ಸಂಸ್ಥೆ ಕಾರ್ಯ ಶ್ಲಾಘನೀಯ.

ಸಾಕಷ್ಟು ವರ್ಷಗಳ ಹಿಂದೆ ಇದೇ ಬಾವಿ ನೀರನ್ನು ಕುಡಿಯಲು ಉಪಯೋಗಿಸುತ್ತಿದ್ದೆವು. ಆದರೆ ಕೆಲ ವರ್ಷಗಳಿಂದ ಬಾವಿ ನೀರು ಕುಡಿಯುವ ಸ್ಥಿತಿಯಲ್ಲಿರಲಿಲ್ಲ. ಬಾವಿ ಹುಲ್ಲು ಪೊದೆಗಳಿಂದ ತುಂಬಿಕೊಂಡಿತ್ತು. ವಿಜಯವಾಣಿ ವರದಿ ಬಳಿಕ ರೋಟರಿ ಸಂಸ್ಥೆ ಬಾವಿಯನ್ನು ಸ್ವಚ್ಛಗೊಳಿಸಿದ್ದಾರೆ. ಮುಂದಿನ ದಿನದಲ್ಲಿ ನೀರನ್ನು ಶುಚಿಗೊಳಿಸಿದರೆ ಈ ಭಾಗದ ಗ್ರಾಮಸ್ಥರ ಉಪಯೋಗಕ್ಕೆ ಬರಲಿದೆ.
ಭಾಸ್ಕರ್ , ಸ್ಥಳೀಯ ನಿವಾಸಿ.

ಹುಲ್ಲು ಪೊದೆಗಳಿಂದ ತುಂಬಿದ್ದ ಬಾವಿಯನ್ನು ನಾವು ಪಾರ್ಕಿಂಗ್ ವ್ಯವಸ್ಥೆ ಮಾಡುವ ಸಂದರ್ಭ ಶುಚಿಗೊಳಿಸಿ ಸುಂದರವಾಗಿಸಿದ್ದೇವೆ. ಮುಂದಿನ ದಿನದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ತರುವಲ್ಲಿ ಶ್ರಮ ವಹಿಸಲಿದ್ದೇವೆ.
ರನೀಶ್ ಆರ್ .ಶೆಟ್ಟಿ, ರೋಟರಿ ಅಧ್ಯಕ್ಷ

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...