ಟ್ರ್ಯಾಕ್ಟರ್​​ಗೆ ಬಸ್ ಡಿಕ್ಕಿ: 10 ಮಂದಿ ಸಾವು, 35 ಜನರಿಗೆ ಗಾಯ...West Bengal accident

West Bengal accident
Published on

West Bengal accident : ಟ್ರ್ಯಾಕ್ಟರ್​​ಗೆ ಬಸ್ ಡಿಕ್ಕಿಯಾಗಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದು, 35 ಜನರು ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.

ಶುಕ್ರವಾರ ಬೆಳಿಗ್ಗೆ ಬುರ್ದ್ವಾನ್‌ನಿಂದ ದುರ್ಗಾಪುರಕ್ಕೆ ಹೋಗುತ್ತಿದ್ದ ಖಾಸಗಿ ಪ್ರಯಾಣಿಕ ಬಸ್ ನಿಲ್ಲಿಸಿದ್ದ ಟ್ರ್ಯಾಕ್ಟರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದು, 35 ಜನರು ಗಾಯಗೊಂಡಿದ್ದಾರೆ. ಪೂರ್ವ ಬುರ್ದ್ವಾನ್‌ನ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 19 ರಲ್ಲಿರುವ ನಲಾ ಫೆರ್ರಿ ಘಾಟ್‌ನಲ್ಲಿ ಈ ಅಪಘಾತ ಸಂಭವಿಸಿದೆ.

ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಬಿಹಾರದವರಾಗಿದ್ದು, ಅವರು ಗಂಗಾ ನದಿಯಲ್ಲಿ ಸ್ನಾನ ಮಾಡಿ ಹಿಂತಿರುಗುತ್ತಿದ್ದರು ಎಂದು ಹೇಳಲಾಗುತ್ತಿದೆ. ಬಸ್ಸಿನಲ್ಲಿ 6 ಮಕ್ಕಳು ಸೇರಿದಂತೆ ಒಟ್ಟು 45 ಪ್ರಯಾಣಿಕರಿದ್ದರು. ಅಪಘಾತದಲ್ಲಿ ಸಾವನ್ನಪ್ಪಿದ 10 ಜನರಲ್ಲಿ 8 ಪುರುಷರು ಮತ್ತು 2 ಮಹಿಳೆಯರು ಸೇರಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲಾ 6 ಮಕ್ಕಳು ಗಾಯಗೊಂಡಿದ್ದಾರೆ.

ಗಾಯಗೊಂಡ ಪ್ರಯಾಣಿಕರ ಸಂಖ್ಯೆ 35 ಎಂದು ಹೇಳಲಾಗಿದೆ. ಎಲ್ಲಾ ಗಾಯಾಳುಗಳನ್ನು ಬರ್ಧಮಾನ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net