More

    ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ.. ಬಾಲಕ ಸಾವು

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಸೋಮವಾರ ಬಾಂಬ್ ಸ್ಫೋಟಗೊಂಡಿದ್ದು, ಏಳು ವರ್ಷದ ಬಾಲಕನೊಬ್ಬ ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಪಾಂಡುವಾವನ್ನು ಬೆಚ್ಚಿಬೀಳಿಸಿದ ಸ್ಫೋಟದಲ್ಲಿ ಇತರ ಇಬ್ಬರು ಅಪ್ರಾಪ್ತ ಬಾಲಕರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇದನ್ನೂ ಓದಿ: ಸಂತ್ರಸ್ತೆ ಎದುರು ರೇವಣ್ಣ ನಿವಾಸದಲ್ಲಿ ಮಹಜರು ನಡೆಸಿದ ಎಸ್ಐಟಿ

    ಪಾಂಡುವಾದ ನೇತಾಜಿಪಲ್ಲಿ ಕಾಲೋನಿಯಲ್ಲಿ ಮಕ್ಕಳ ಗುಂಪು ಕೊಳದ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಇದ್ದಕ್ಕಿದ್ದಂತೆ ಭಾರಿ ಶಬ್ದ ಕೇಳಿಬಂದಿದ್ದು, ಕೂಡಲೇ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ. ಆದರೆ ಆ ವೇಳೆಗಾಗಲೇ ಅಲ್ಲಿ ಹಲವಾರು ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

    ಸ್ಫೋಟದಿಂದ ಗಾಯಗೊಂಡ ಮೂವರು ಬಾಲಕರನ್ನು ಪಾಂಡುವಾ ಆಸ್ಪತ್ರೆಗೆ ತ್ವರಿತವಾಗಿ ಸಾಗಿಸಲಾಯಿತು. ಆದರೆ ಒಬ್ಬ ಬಾಲಕ ತೀವ್ರವಾಗಿ ಗಾಯಗೊಂಡಿದ್ದು, ಆ ವೇಳೆಗಾಗಲೇ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ.

    ಬದುಕುಳಿದ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ನಂತರ ಅವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಚುಂಚೂರ ಇಮಾಂಬರ ಆಸ್ಪತ್ರೆಗೆ ಕಳುಹಿಸಲಾಗಿದೆ.

    ಹೂಗ್ಲಿ ಗ್ರಾಮಾಂತರ ಪೊಲೀಸರು ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದು, ಸ್ಫೋಟದ ಸುತ್ತಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಅಷ್ಟೇ ಅಲ್ಲ ಆ ಭಾಗದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಯಾರಾದರೂ ಓಡಾಡಿದ್ದರೇ ಎಂಬ ಮಾಹಿತಿಯನ್ನೂ ಸ್ಥಳೀಯರಿಂದ ಸಂಗ್ರಹಿಸುತ್ತಿದ್ದಾರೆ.

    ಬಾಂಬ್​ ಸ್ಫೋಟಿಸಿರುವುದಕ್ಕೆ ಈ ಭಾಗದಲ್ಲಿ ರಾಜಕೀಯ ವೈಮನಸ್ಸು ಕಾರಣವಿರಬಹುದೇ ಎಂಬ ಕೋನದಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಭಯಹುಟ್ಟಿಸಲು ಟಿಎಂಸಿ ಯತ್ನ: ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಪಾಂಡುವಾದಲ್ಲಿ ಹೂಗ್ಲಿ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ರಚನಾ ಬ್ಯಾನರ್ಜಿ ಪರ ಚುನಾವಣಾ ಸಮಾವೇಶವನ್ನು ಯೋಜಿಸಿದ್ದಾರೆ. ಸ್ಥಳೀಯ ಬಿಜೆಪಿ ಸಂಸದ ಲಾಕೆಟ್ ಚಟರ್ಜಿ ಅವರು ತೃಣಮೂಲ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದರು, ಘಟನೆಯಲ್ಲಿ ಆಡಳಿತ ಪಕ್ಷದ ಕೈವಾಡವಿದೆ. ರಾಜ್ಯದ ಆಡಳಿತ ಪಕ್ಷವು ಭಯ ಹುಟ್ಟಿಸುವ ಸಲುವಾಗಿ ಬಾಂಬ್​ ಸ್ಫೋಟಿಸಲಾಗಿದೆ ಎಂದು ಪ್ರತಿಪಾದಿಸಿದರು.

    ಬ್ರೆಜಿಲ್‌ನಲ್ಲಿ ಭೀಕರ ಪ್ರವಾಹ: 78 ಮೃತ್ಯು- 105 ಮಂದಿ ನಾಪತ್ತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts