

ಪಶ್ಚಿಮ ಬಂಗಾಳ: ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಸಿಲಿಗುರಿಯ ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಜಲಪೈಗುರಿಯಲ್ಲಿ ಸಾರ್ವಜನಿಕ ಸಭೆಯ ನಂತರ ಸಿಎಂ ಬಾಗ್ದೋಗ್ರಾಕ್ಕೆ ತೆರಳುತ್ತಿದ್ದರು. ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಮಮತಾ ಸುರಕ್ಷಿತವಾಗಿದ್ದಾರೆ ಎಂದು ಟಿಎಂಸಿ ನಾಯಕ ರಾಜೀಬ್ ಬ್ಯಾನರ್ಜಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.