More

  ಪಶ್ಚಿಮ ಬಂಗಾಳ: 50 ಸಾವಿರ ಮತಗಳ ಅಂತದಿಂದ ಗೆದ್ದ ಕ್ರಿಕೆಟಿಗ ಯೂಸುಫ್ ಪಠಾಣ್!

  ಪಶ್ಚಿಮ ಬಂಗಾಳ: 2024ರ ಲೋಕಸಭೆ ಚುನಾವಣೆಯಲ್ಲಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಬೀಗಿದ್ದಾರೆ.

  ಇದನ್ನೂ ಓದಿ: ಗಾಂಧಿನಗರ: ಅಮಿತ್ ಷಾಗೆ 7 ಲಕ್ಷಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಗೆಲುವು!

  ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ತಮ್ಮ ಎದುರಾಳಿಯಾಗಿರುವ ಕಾಂಗ್ರೆಸ್ ಅಭ್ಯರ್ಥಿ, ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸೋಲಿಸಿದ್ದಾರೆ.

  ಯೂಸುಫ್ ಪಠಾಣ್ 4,08,240 ಮತಗಳನ್ನು ಪಡೆದಿದ್ದಾರೆ. ಅವರ ಎದುರಾಳಿಯಾಗಿರುವ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ವಿರುದ್ಧ 59,351 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಅಧೀರ್ ರಂಜನ್ ಚೌಧರಿ 3,48,889 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ 3,12,876 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

  yf

  ಲೋಕಸಭೆ ಚುನಾವಣೆಯಲ್ಲಿ ಗೆದ್ದು ಈ ಹಿಂದೆ ಹಲವು ಕ್ರಿಕೆಟಿಗರು ಸಂಸತ್ತಿಗೆ ಪ್ರವೇಶ ಮಾಡಿದ್ದರು. ಗೌತಮ್ ಗಂಭೀರ್, ನವಜೋತ್ ಸಿಂಗ್ ಸಿಧು, ಮೊಹಮ್ಮದ್ ಅಜರುದ್ದೀನ್, ಕೀರ್ತಿ ಆಜಾದ್ ಮತ್ತು ಚೇತನ್ ಚೌಹಾಣ್ ಸೇರಿದ್ದಾರೆ. ಗಂಭೀರ್ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿ ಗೆದ್ದಿದ್ದರು.

  ಯೂಸುಫ್ ಪಠಾಣ್ 2007 ಮತ್ತು 2011 ರಲ್ಲಿ ಭಾರತ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದರು. ಯೂಸುಫ್ ಐಪಿಎಲ್ ವಿಜೇತ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡದಲ್ಲಿ ಆಡಿದ್ದರು.

  ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹ್ಯಾಟ್ರಿಕ್ ಗೆಲುವು!

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts