ಕೋಲ್ಕತಾ: ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಂತರ ಇಂಥಾ ಕ್ರೂರ ಘಟನೆಗಳನ್ನು ತಡೆಯಲು ಕಠಿಣ ಕಾನೂನು ರೂಪಿಸುವಂತೆ ಎಲ್ಲೆಡೆ ಒತ್ತಾಯ ಕೇಳಿಬಂದಿತು. ಆಗಸ್ಟ್ 9ರಂದು ನಡೆದ ಈ ಪ್ರಕರಣ ರಾಷ್ಟ್ರವ್ಯಾಪಿ ಆಕ್ರೋಶವನ್ನು ಹುಟ್ಟುಹಾಕಿತು. ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ಮತ್ತು ಮುಷ್ಕರಗಳಿಗೆ ಕಾರಣವಾಯಿತು. ಇದ್ದರಿಂದ ಎಚ್ಚೆತ್ತುಕೊಂಡ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಅತ್ಯಾಚಾರ ವಿರೋಧಿ ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದೆ.
ಇದನ್ನು ಓದಿ: ಕಮ್ಯುನಿಸ್ಟರಿಗೆ ಇರುವ ಸ್ವಾತಂತ್ರ್ಯ ನಮಗಿಲ್ಲ; ಬಿಟೌನ್ ಕ್ವೀನ್ ಹೀಗೆಳಿದ್ದೇಕೆ
ಪಶ್ಚಿಮ ಬಂಗಾಳ ಸರ್ಕಾರವು ಇಂದಿನಿಂದ 2 ದಿನಗಳ ವಿಶೇಷ ಅಧಿವೇಶನ ಕರೆದಿದೆ. ಈ ವಿಶೇಷ ಅಧಿವೇಶನದಲ್ಲಿ ಅತ್ಯಾಚಾರ ಅಪರಾಧಿಗಳಿಗೆ 10 ದಿನದಲ್ಲಿ ಮರಣದಂಡನೆ ಶಿಕ್ಷೆ ವಿಧಿಸುವ ಮಸೂದೆ ಮಂಡಿಸಲು ತೀರ್ಮಾನಿಸಲಾಗಿದೆ. ನಮ್ಮ ಸರ್ಕಾರ ಅತ್ಯಾಚಾರ ವಿರೋಧಿ ಕಾನೂನನ್ನು ಜಾರಿಗೆ ತರುತ್ತದೆ. ಈ ಮಸೂದೆ ಮೂಲಕ ಅತ್ಯಾಚಾರ ಆರೋಪಿಗಳಿಗೆ 10 ದಿನಗಳಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗುವುದು ಎಂದು ಕೆಲವು ದಿನಗಳ ಹಿಂದೆ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದರು.
ಈ ಮಸೂದೆಯು ಮಂಗಳವಾರ(ಸೆಪ್ಟೆಂಬರ್ 3)ದಂದು ಪ್ರಸ್ತಾವಿತ ವಿಧೇಯಕ ಬಂಗಾಳ ವಿಧಾನಸಭೆಯಲ್ಲಿ ಮಂಡನೆಯಾಗಲಿದ್ದು, ಅತ್ಯಾಚಾರದ ವಿರುದ್ಧದ ಈ ಮಸೂದೆಗೆ ಪ್ರತಿಪಕ್ಷ ಬಿಜೆಪಿಯು ಬೆಂಬಲ ವ್ಯಕ್ತಪಡಿಸಿದೆ. ವಿಧಾನಸಭೆಯಲ್ಲಿ ಮಂಡಿನೆಯಾಗಲಿರುವ ಅತ್ಯಾಚಾರ ವಿರೋಧಿ ಮಸೂದೆಗೆ ಭಾರತೀಯ ಜನತಾ ಪಕ್ಷದ ಬೆಂಬಲವಿದೆ. ಆದರೆ ಮಹಿಳೆಯರ ಸುರಕ್ಷತೆಯ ವಿಚಾರದಲ್ಲಿ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯದ ಸಿಎಂ ಮಮತಾ ಬ್ಯಾನರ್ಜಿ ಅವರ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆಯೊಳಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಬಿಜೆಪಿ ನಾಯಕ ಸುಕಾಂತ್ ಮಜುಂದಾರ್ ತಿಳಿಸಿದ್ದಾರೆ.
ಕೋಲ್ಕತಾ ಹೈಕೋರ್ಟ್‌ನ ಆದೇಶವನ್ನು ಅನುಸರಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣ ಹಾಗೂ ಘಟನೆ ನಡೆದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪಾದಿತ ಹಣಕಾಸಿನ ಅಕ್ರಮಗಳ ಮೇಲೆ ತನಿಖೆ ನಡೆಯುತ್ತಿದೆ. ಅಪರಾಧಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾ ಪೊಲೀಸ್ ನಾಗರಿಕ ಸ್ವಯಂಸೇವಕನನ್ನು ಬಂಧಿಸಿದೆ. (ಏಜೆನ್ಸೀಸ್)
ನಡುರಸ್ತೆಯಲ್ಲೆ ಮಾಜಿ ಕಾರ್ಪೊರೇಟರ್ ಹತ್ಯೆ; ಸಿಸಿಟಿವಿ ದೃಶ್ಯದಿಂದ ಬಯಲಾಯ್ತು ಸ್ಫೋಟಕ ಮಾಹಿತಿ