More

    ಷಾ ನೇತೃತ್ವದಲ್ಲಿ ಮಂಗಳೂರಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ; ಚಾಣಕ್ಯ ನೀಡಿದ ಸೂಚನೆಗಳೇನು?

    ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಗೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ಇಂದು ಮಂಗಳೂರಿನ ಬಿಜೆಪಿ ಕೋರ್​ ಕಮಿಟಿ ಸಭೆ ನಡೆದಿದ್ದು, ಸಭೆಯಲ್ಲಿ ಪಕ್ಷದ ಮುಖಂಡರಿಗೆ ಷಾ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಈ ಕುರಿತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಭೆ ಬಳಿಕ ಮಾಹಿತಿ ಹಂಚಿಕೊಂಡಿದ್ದಾರೆ.

    ಮಂಗಳೂರಿನ ಶ್ರೀದೇವಿ ಇನ್​ಸ್ಟಿಟ್ಯೂಟ್​ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಷಾ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಮಂಗಳೂರು ಹಾಗೂ ಶಿವಮೊಗ್ಗ ವಿಭಾಗದ ಜಿಲ್ಲೆಗಳ ಪ್ರಮುಖ ಬಿಜೆಪಿ ನಾಯಕರು ಭಾಗಿಯಾಗಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್ ಮಾತ್ರವಲ್ಲದೆ ಮಂಗಳೂರು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಬಿಜೆಪಿ ಶಾಸಕರು ಹಾಗೂ‌ ಮಾಜಿ ಶಾಸಕರು ಪಾಲ್ಗೊಂಡಿದ್ದಾರೆ.

    ಕರಾವಳಿ ಹಾಗೂ ಮಲೆನಾಡಿನಲ್ಲಿ ಮೇಲ್ನೋಟಕ್ಕೆ ಸೊರಗಿದಂತೆ ಕಾಣುತ್ತಿರುವ ಬಿಜೆಪಿಯ ಶಕ್ತಿ ವೃದ್ಧಿಸುವ ನಿಟ್ಟಿನಲ್ಲಿ ಷಾ ಈ ಸಭೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಸಭೆಯಲ್ಲಿನ ಸೂಚನೆಗಳ ಕುರಿತಂತೆ ಯಡಿಯೂರಪ್ಪ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

    ಪ್ರತಿ ವಿಧಾನಸಭಾ ಕ್ಷೇತ್ರದ ಬಗ್ಗೆ ಗಮನ ಹರಿಸಿ, ಪ್ರತಿ ಹಳ್ಳಿಯ ಮನೆಮನೆಗೂ ತೆರಳಿ ಎಲ್ಲ ಮತದಾರರನ್ನು ಮಾತನಾಡಿಸುವ ಕೆಲಸವನ್ನು ನಾಳೆಯಿಂದಲೇ ಆರಂಭಿಸಿ ಹಾಗೂ ಇನ್ನೊಂದು ತಿಂಗಳು ಪೂರ್ತಿ ಇದೇ ಕೆಲಸ ಮಾಡಿ, ಆ ಬಳಿಕ ಇನ್ನೊಂದು ಬಾರಿ ಬಂದು ಮಾತನಾಡುತ್ತೇನೆ ಎಂದು ಷಾ ಸೂಚಿಸಿದ್ದಾರೆ. ಚುನಾವಣೆ ಹತ್ತಿರ ಬಂತು, ಪಕ್ಷ ಕಟ್ಟುವ ಬಗ್ಗೆ ಗಮನಕೊಡಿ. ನಿಶ್ಚಿತವಾಗಿ ನಾವು ಅಧಿಕಾರಕ್ಕೆ ಬರುತ್ತೇವೆ ಎಂದೂ ಷಾ ಹೇಳಿದ್ದಾಗಿ ಬಿಎಸ್​ವೈ ತಿಳಿಸಿದ್ದಾರೆ.

    ತನ್ನ ನೆಚ್ಚಿನ ನಾಯಕ ಸಿಎಂ ಆಗಲೆಂದು 25 ವರ್ಷದಿಂದ ಗಡ್ಡ ಬಿಟ್ಟ ಅಭಿಮಾನಿ!

    ಯುಕೆಜಿ ಮಗು ಫೇಲ್: ತಪ್ಪು ನಮ್ಮದಲ್ಲ ಎಂದ ಶಾಲೆಯವರು ಶಿಕ್ಷಣ ಇಲಾಖೆಗೆ ನೀಡಿದ ಸ್ಪಷ್ಟನೆ ಇದು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts