ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಮೇಲೆ ನಿರ್ಬಂಧ... ಸಿಎಂ ಯಡಿಯೂರಪ್ಪ ಹೇಳಿದ್ದೇನು?

theatre
Published on

ಬೆಂಗಳೂರು : ಕರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್​ ಮತ್ತಿತರ ರಾಜ್ಯಗಳಲ್ಲಿ ಚಲನಚಿತ್ರಮಂದಿರಗಳನ್ನು ಅರ್ಧದಷ್ಟು ಸಾಮರ್ಥ್ಯಕ್ಕೆ ಮಾತ್ರ ತುಂಬಿಸಿ ನಡೆಸುವ ಆದೇಶ ಬಂದಿದೆ. ಈ ನಿಟ್ಟಿನಲ್ಲಿ ಕರ್ನಾಟಕದ ಸನ್ನಿವೇಶದ ಬಗ್ಗೆಯೂ ಗೊಂದಲ ಕೇಳಿಬಂದಿದೆ. ಈ ಬಗ್ಗೆ ಖುದ್ದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರೇ ಸಂದೇಹಗಳನ್ನು ಬಗೆಹರಿಸಿದ್ದಾರೆ.

"ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕರೊನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ" ಎಂದು ಇಂದು ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸಂದೇಶ ಪ್ರಕಟವಾಗಿದೆ.

ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net