More

    ರಾಗಿಗುಡ್ಡದಲ್ಲಿ ನಡೆದಿರುವುದು ಕೋಮುಗಲಭೆಯಲ್ಲ: ಸಚಿವ ಮಧು ಬಂಗಾರಪ್ಪ

    ಶಿವಮೊಗ್ಗ: ರಾಗಿಗುಡ್ಡದಲ್ಲಿ ನಡೆದಿರುವುದು ಕೋಮುಗಲಭೆಯಲ್ಲ, ಯಾರೋ ಮಾನಸಿಕ ಸ್ಥಿಮಿತ ಕಳೆದುಕೊಂಡವರು ಈ ರೀತಿ ಮಾಡಿದ್ದಾರೆ. ಉಳಿದ ಎಲ್ಲ ಕಡೆ ಹಬ್ಬ ಚೆನ್ನಾಗಿಯೇ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

    ಗಣೇಶ ವಿಸರ್ಜನೆ ಹಾಗೂ ಈದ್ ಮಿಲಾದ್ ಎರಡು ಒಂದೇ ದಿನ ಇತ್ತು. ಈ ಬಗ್ಗೆ ಸಭೆ ಮಾಡಿದ್ದೆವು. ಈ ವೇಳೆ ಮುಸ್ಲಿಂ ಬಾಂಧವರು ಭಾನುವಾರ ಮೆರವಣಿಗೆ ಮಾಡುವುದಾಗಿ ಹೇಳಿದ್ದರು. ಇಲ್ಲಿ ಒಂದೇ ರಸ್ತೆಯಲ್ಲಿ ಮೆರವಣಿಗೆ ಆಗುತ್ತದೆ. ಈ ವೇಳೆ ಹಿಂದು ಹಬ್ಬ ಆದರೆ ಮುಸ್ಲಿಮರು ಹೋಗ್ತಾರೆ. ಹಾಗೆಯೇ ಮುಸ್ಲಿಮರ ಹಬ್ಬ ಆದರೆ ಹಿಂದುಗಳು ಹೋಗುತ್ತಾರೆ. ಈ ವೇಳೆ ಯಾರೋ ಒಂದೆರಡು ಜನ ಕಿಡಿಗೇಡಿಗಳು ಈ ರೀತಿ ಗಲಾಟೆ ಮಾಡಿದ್ದಾರೆ ಎಂದಿದ್ದಾರೆ.
    ಮನೆಗಳಿಗೂ ನುಗ್ಗಿ ಗಲಭೆ ಮಾಡಿದ್ದಾರೆ. ಈ ರೀತಿ ಬರೀ ರಾಗಿಗುಡ್ಡದಲ್ಲಿ ಮಾತ್ರ ನಡೆದಿದೆ ಎಂದಿದ್ದಾರೆ. ಯಾರೇ ಕಾನೂನು ಮೀರಿ ಹೋದರೆ ಏನು ಶಿಕ್ಷೆ ಕೊಡಬೇಕೋ ಅದನ್ನು ಕೊಡುತ್ತೇವೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts