More

    ಕರ್ನಾಟಕದಲ್ಲಿ ಲಾಕ್​ಡೌನ್ ? ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು…

    ಬೆಂಗಳೂರು: ಮಹಾರಾಷ್ಟ್ರದಲ್ಲಿ ಕರೊನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕರೊನಾ ಎರಡನೇ ಅಲೆ ಏಳುವ ಅನುಮಾನಗಳು ಹೆಚ್ಚಾಗಿವೆ. ಈ ದೃಷ್ಟಿಯಿಂದ ಕರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ. ಆದರೆ, ಮತ್ತೆ ಲಾಕ್​ಡೌನ್ ಅಥವಾ ನೈಟ್​ ಕರ್ಫ್ಯೂ ವಿಧಿಸುವ ಯಾವುದೇ ಆಲೋಚನೆ ಇಲ್ಲ ಎಂದು ಕರ್ನಾಟಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

    ಎರಡು ದಿನಗಳ ಹಿಂದೆ ಬಿಬಿಎಂಪಿ ಕಮಿಷನರ್ ಎನ್.ಮಂಜುನಾಥಪ್ರಸಾದ್, ಆರೋಗ್ಯಾಧಿಕಾರಿಗಳ ಸಭೆಯಲ್ಲಿ, ನಾಗರಿಕರು ಕರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಸರಿಯಾಗಿ ಪಾಲಿಸದಿದ್ದಲ್ಲಿ ಮತ್ತೆ ಲಾಕ್​ಡೌನ್ ವಿಧಿಸಬೇಕಾಗುವುದು ಎಂಬ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಬೆಂಗಳೂರು ಅಥವಾ ರಾಜ್ಯದ ಇತರ ಭಾಗದಲ್ಲಿ ಲಾಕ್​ಡೌನ್​ ವಿಧಿಸುವ ಯಾವುದೇ ಆಲೋಚನೆ ಅಥವಾ ಪ್ರಸ್ತಾವನೆಗಳಿಲ್ಲ ಎಂದು ಸುಧಾಕರ್ ಹೇಳಿದ್ದಾರೆ.

    ಇದನ್ನೂ ಓದಿ: ಮತ್ತೆ ಹಬ್ಬುತ್ತಿದೆ ಕರೊನಾ… ಮತ್ತೊಬ್ಬ ಸಚಿವರಲ್ಲಿ ಕರೊನಾ ಸೋಂಕು ಪತ್ತೆ !

    “ಕರ್ನಾಟಕದಲ್ಲಿ ಕರೊನಾ ಪ್ರಕರಣಗಳು ಹೆಚ್ಚಿಲ್ಲ. ಕೇರಳ ಅಥವಾ ಮಹಾರಾಷ್ಟ್ರದಂತೆ ಲಾಕ್​ಡೌನ್ ಬೇಕಾಗುವಂಥ ಸನ್ನಿವೇಶ ರಾಜ್ಯದಲ್ಲಿ ಇಲ್ಲ” ಎಂದಿರುವ ಸಚಿವರು, ಮಹಾರಾಷ್ಟ್ರ ಮತ್ತು ಕೇರಳದಂತಹ ಸ್ಥಿತಿಯನ್ನು ತಡೆಗಟ್ಟುವ ದೃಷ್ಟಿಯಿಂದ ಗಡಿ ಪ್ರದೇಶಗಳಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದಿದ್ದಾರೆ.

    ಆದಾಗ್ಯೂ ಜನರಲ್ಲಿ ಕರೊನಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಿರ್ಲಕ್ಷ್ಯ ಹೆಚ್ಚಿದ್ದು, ಕರೊನಾ ಹೊರಟುಹೋಗಿದೆ ಎಂಬ ತಪ್ಪು ಕಲ್ಪನೆ ಜನರಲ್ಲಿ ಮೂಡಿರುವಂತಿದೆ ಎಂದ ಸುಧಾಕರ್, ಮಾಸ್ಕ್ ಧರಿಸುವ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತಹ ಕ್ರಮಗಳನ್ನು ಅನುಸರಿಸದಿದ್ದಲ್ಲಿ ಅಪಾಯ ಎದುರಿಸಬೇಕಾಗುವುದು ಎಂದು ಎಚ್ಚರಿಸಿದ್ದಾರೆ.(ಏಜೆನ್ಸೀಸ್)

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ಹೆಚ್ಚು ಹರಡುವ ಹೊಸ ರೂಪ ತಾಳುತ್ತಿದೆ ಕರೊನಾ : ವಹಿಸಿರಿ ಕಟ್ಟೆಚ್ಚರ

    ಹದಿಹರೆಯದ ಮಗಳನ್ನೇ ರೇಪ್ ಮಾಡಿ ಗರ್ಭಿಣಿಯಾಗಿಸಿದ, ಗರ್ಭಪಾತವಾದ ಮೇಲೆ ಮತ್ತೆ ಮೇಲೆರಗಿದ… ಕೋರ್ಟ್ ಹೇಳಿದ್ದೇನು ?

    ಕಲ್ಲಿದ್ದಲು ಕಳ್ಳಸಾಗಾಣಿಕೆ : ಅಭಿಷೇಕ್ ಬ್ಯಾನರ್ಜಿ ಹೆಂಡತಿಗೆ ಸಿಬಿಐ ನೋಟೀಸು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts