More

    ವೃದ್ಧರಿಗೆ ‘ಅನ್ನ ಸುವಿಧಾ’ ಯೋಜನೆ, ಏನಿದು? ಕಾರ್ಮಿಕರಿಗೆ ಸಿಕ್ಕಿದ್ದೇನು?

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್​ನಲ್ಲಿ ಅನ್ನ ಸುವಿಧಾ ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಆಹಾರ ಭದ್ರತಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಹಸಿವು ಮುಕ್ತ ಕರ್ನಾಟಕದ ನಮ್ಮ ಆಶಯ ಈಡೇರಿಸಲು ನೆರವಾಗಲಿದೆ ಎಂದು ಬಜೆಟ್ ನಲ್ಲಿ ತಿಳಿಸಲಾಗಿದೆ.

    ಇದನ್ನೂ ಓದಿ: ಇಂಟರ್‌ನೆಟ್‌ನಲ್ಲಿ ಸಖತ್‌ ಸದ್ದು ಮಾಡುತ್ತಿವೆ ‘ಸೋಫಿಯಾ’ ಹಾಟ್ ಫೋಟೋಸ್‌.. ಟಿಕ್​ಟಾಕ್​ ತಾರೆಯ ಮೈಮಾಟಕ್ಕೆ ನೆಟ್ಟಿಗರು ಫಿದಾ..!

    ಅನ್ನ ಸುವಿಧಾ ಹೊಸ ಯೋಜನೆಯಡಿ ಹೋಮ್ ಡೆಲಿವರಿ ಆಪ್ ಮೂಲಕ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ಸಾಮಾಜಿಕ ಭದ್ರತಾ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.

    ಕಾರ್ಮಿಕ ವಲಯಕ್ಕೆ ಸಿಕ್ಕಿದ್ದೇನು?
    ಕಾರ್ಮಿಕರ ಕಲ್ಯಾಣಕ್ಕೆ ಹೊಸ ವಿಧೇಯಕ ಜಾರಿಗೆ ತರಲಿದ್ದು, ಈ ಮೂಲಕ ಆನ್ ಲೈನ್ ವಹಿವಾಟುಗಳ ಮೇಲೆ ಸೆಸ್ ವಿಧಿಸಿ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮ ರೂಪಿಸುವುದಾಗಿ ಬಜೆಟ್ ನಲ್ಲಿ ಉಲ್ಲೇಖಿಸಲಾಗಿದೆ.

    ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ವಲಸೆ ಹೋದ ಸಂದರ್ಭದಲ್ಲಿ ಅವರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲು ಆಯ್ದ 10 ಜಿಲ್ಲೆಗಳಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ನಿರ್ಮಿಸಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.

    ವಾಣಿಜ್ಯ ಸಾರಿಗೆ ವಾಹನಗಳ ನೋಂದಣಿಯ ಮೇಲೆ ಸುಂಕವನ್ನು ವಿಧಿಸುವ ಮೂಲಕ ಸಾರಿಗೆ ವಾಹನಗಳ ಕಾರ್ಮಿಕರಿಗೆ ಭದ್ರತಾ ಮತ್ತು ಕಲ್ಯಾಣ ಕಾರ್ಯಕ್ರಮಗಳನ್ನು ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ರೂಪಿಸಲಾಗುವುದು. ಅಲ್ಲದೇ ವಾಹನ ಚಾಲಕರಿಗೆ ನಿಲ್ದಾಣ/ಹೆದ್ದಾರಿ ಬದಿಯಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಮುಂಗಡ ಪತ್ರದಲ್ಲಿ ತಿಳಿಸಲಾಗಿದೆ.

    ಇ.ಎಸ್.ಐ ಯೋಜನೆಯಡಿ ಒಟ್ಟಾರೆ 311 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳು, 40 ವರ್ಷ ಮೇಲ್ಪಟ್ಟು ಕಾರ್ಮಿಕರಿಗೆ ಸಮಗ್ರ ಆರೋಗ್ಯ ತಪಾಸಣೆ, ಎಲ್ಲಾ ವಿಮಾದಾರರಿಗೆ ಟೆಟಾನಸ್​ ಮತ್ತು ಹೆಪಾಟಿಟಿಸ್ ಲಸಿಕೆ ಕಾರ್ಯಕ್ರಮ ಹಾಗೂ ಅತ್ಯಾಧುನಿಕ ರೋಗಪತ್ತೆ ಹಚ್ಚುವ ಕೇಂದ್ರ ಸ್ಥಾಪನೆ ಅನುಷ್ಠಾನಗೊಳಿಸುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ.

    ಗ್ಯಾರಂಟಿ ಗುಂಗಿನಲ್ಲಿರುವ ಸಿದ್ದರಾಮಯ್ಯ ಜನರ ಕಿವಿಗೆ ಹೂ ಮುಡಿಸಿದ್ದಾರೆ: ಕುಮಾರಸ್ವಾಮಿ ಪ್ರತಿಕ್ರಿಯೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts