More

    7 ವರ್ಷದ ಪ್ರೀತಿ, 6 ವರ್ಷದ ಯುವ ರಾಜ್​ ದಾಂಪತ್ಯದಲ್ಲಿ ಬಿರುಕು; ದೊಡ್ಮನೆ ಸೊಸೆ ಶ್ರೀದೇವಿ ಹಿನ್ನೆಲೆ ಏನು ಗೊತ್ತಾ?

    ಬೆಂಗಳೂರು: ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್‌ ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ.

    ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೂನ್​ 6ರಂದು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ.

    ಮೂಲತಃ ಮೈಸೂರಿನ ಹುಡುಗಿ ಶ್ರೀದೇವಿ ಭೆರಪ್ಪ. ಅಲ್ಲೇ ಹುಟ್ಟಿ ಅಲ್ಲೇ ಬೆಳೆದು ಉನ್ನತ ಶಿಕ್ಷಣ ಮುಗಿಸಿದರು. ಯುವ ಮತ್ತು ಶ್ರೀದೇವಿ ಪ್ರಾರಂಭದಲ್ಲಿ ಫ್ರೆಂಡ್ಸ್​ ಆಗಿದ್ದರು. ಬಳಿಕ ಇವರ ಸ್ನೇಹ ಪ್ರೀತಿಗೆ ತಿರುಗಿದೆ. ಅಚ್ಚರಿಯ ಸಂಗತಿ ಎಂದರೆ 7 ವರ್ಷದಿಂದ ಈ ಜೋಡಿ ಪ್ರೀತಿಸಿ ಬಳಿಕ ವಿವಾಹವಾಗುತ್ತಾರೆ.

    2019ರಲ್ಲಿ ಯುವ ರಾಜ್​ಕುಮಾರ್​ ಮತ್ತು ಶ್ರೀದೇವಿ ವಿವಾಹವಾಗುತ್ತಾರೆ. ಬಳಿಕ ರಾಜ್​ ಫ್ಯಾಮಿಲಿ ಸೇರುತ್ತಾರೆ. ಅಂದಹಾಗೆಯೇ ಶ್ರೀದೇವಿ ‘ಡಾ.ರಾಜ್​​ ಕುಮಾರ್​ ಸಿವಿಲ್​ ಸರ್ವೀಸ್​ ಅಕಾಡೆಮಿ’ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ಆದರೀಗ ಈ ಜೋಡಿ ನಡುವೆ ಮನಸ್ತಾಪವಿದೆ ಎಂದು ಹೇಳಲಾಗುತ್ತಿದೆ. ಕೆಲವು ದಿನಗಳಿಂದ ಇಬ್ಬರೂ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇನ್ನೂ ಯುವ ಸಿನಿಮಾ ಪ್ರಚಾರದಲ್ಲಿ ಪತ್ನಿ ಶ್ರೀದೇವಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.

    ದೊಡ್ಮನೆ ಸಂಸಾರದಲ್ಲಿ ಬಿರುಗಾಳಿ; ವಿಚ್ಛೇದನಕ್ಕೆ ಮುಂದಾದ ಯುವ ರಾಜ್​ಕುಮಾರ್

    See also  ಎರಡು ವರ್ಷಗಳ ನಂತರ ಹೆದರಿಸಲು ಬರುತ್ತಿದ್ದಾರೆ 'ದಿಯಾ' ಖುಷಿ …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts