17.8 C
Bengaluru
Wednesday, January 22, 2020

FACT CHECK | ಪೌರತ್ವ ತಿದ್ದುಪಡಿ ಮಸೂದೆ ವಿರೋಧಕ್ಕೆ ಸೇರಿದ ಭಾರಿ ಜನಸ್ತೋಮದ ನೈಜ್ಯ ಕತೆ ಏನು?

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಷ್ಟ್ರದಲ್ಲಿ ಪ್ರತಿಭಟನೆ ನಡೆಯುತ್ತಿರುವ ಬೆನ್ನಹಿಂದೆಯೇ ಕಾಯ್ದೆ ವಿರುದ್ಧ ಪ್ರತಿಭಟಿಸಲು ಸೇರಿರುವ ಭಾರಿ ಜನಸ್ತೋಮದ ಒಂದು ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಕಾಡ್ಗಿಚ್ಚಿನಂತೆ ಹರಿದಾಡುತ್ತಿರುವ ಈ ಫೋಟೋ ಮುಂಬೈನಲ್ಲಿ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಲು ಮೇಲು ಸೇತುವೆ ಕೆಳೆಗೆ ಸೇರಿರುವ ನಾಗರಿಕರು ಎಂದು ಹೇಳಿಕೊಂಡಿದೆ. ಆದರೆ ಈ ಪೋಟೋ ನಕಲಿ ಎಂಬುದು ಫ್ಯಾಕ್ಟ್​ ಚೆಕ್​ನಿಂದ ಪತ್ತೆಯಾಗಿದೆ.

ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ (ಎಎಫ್‌ಡಬ್ಲ್ಯೂಎ) ಫ್ಯಾಕ್ಟ್​ ಚೆಕ್​ ಮಾಡಿ ವೈರಲ್ ಆಗಿರುವ ಫೋಟೋಗೂ ಪೌರತ್ವ ಕಾಯ್ದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಕಂಡುಹಿಡಿದಿದೆ. ಈ ಪೋಟೋ ನೆರೆ ರಾಷ್ಟ್ರ ಬಾಂಗ್ಲಾದೇಶದ್ದು. ಅಲ್ಲಿ ತಿಂಗಳ ಹಿಂದೆ ನಡೆದ ಪ್ರತಿಭಟನೆಯ ಪೋಟೋ ಎಂದು ಪತ್ತೆಯಾಗಿದೆ.

ಹೈದರಾಬಾದ್ ಸ್ಟಾರ್ ನ್ಯೂಸ್ 72 ಎಂಬ ಫೇಸ್​ಬುಕ್ ಪುಟದಲ್ಲಿ ಈ ಫೊಟೋ ಅಪ್​ಲೋಡ್​ ಆಗಿದೆ. 27 ಸಾವಿರಕ್ಕೂ ಅಧಿಕವಾಗಿ ಮರುಹಂಚಿಕೆಯಾಗಿದೆ. ಈ ಫೇಸ್​ಬುಕ್​ ಪುಟವನ್ನು 1.6 ಲಕ್ಷ ಬಳಕೆದಾರರು ಅನುಸರಿಸುತ್ತಿದ್ದಾರೆ.

ಈ ಪೋಸ್ಟ್ ಫೇಸ್​ಬುಕ್​ ಅಲ್ಲದೆ ಟ್ವಿಟರ್‌ನಲ್ಲಿಯೂ ವೈರಲ್ ಆಗಿದೆ. ಯಾಂಡೆಕ್ಸ್ ರಿವರ್ಸ್ ಹುಡುಕಾಟದ ಸಹಾಯದಿಂದ ವೈರಲ್ ಚಿತ್ರಕ್ಕೆ ಸಂಬಂಧಿಸಿದ ಯೂಟ್ಯೂಬ್ ವೀಡಿಯೊ ಗಮನಿಸಿದಾಗ. ವೈರಲ್ ಆದ ಚಿತ್ರ ಹಾಗೂ ಬಾಂಗ್ಲಾದೇಶದಲ್ಲಿ ನಡೆದ ಮೆರವಣಿಗೆ ಚಿತ್ರ ಒಂದೇ ಆಗಿವೆ. ಇದನ್ನು ನವೆಂಬರ್ 10, 2019 ರಂದು ಅಪ್‌ಲೋಡ್ ಮಾಡಲಾಗಿದೆ.

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಪ್ರವಾದಿ ಮುಹಮ್ಮದ್ ಅವರ ಜನ್ಮದಿನ ಈದ್-ಮಿಲಾದ್-ಅನ್-ನಬಿ ಸಂದರ್ಭದಲ್ಲಿ ಮುಸ್ಲಿಂ ಸಮುದಾಯವು ಸೇರಿದ್ದ ಸಭೆ ಅದು. 2019ರ ನವೆಂಬರ್​ 9 ಹಾಗೂ 10ರಂದು ಅಲ್ಲಿ ಸಭೆ ಸೇರಿ ಈದ್​ ಮಿಲಾದ್​ ಆಚರಿಸಲಾಯಿತು. ಈ ಚಿತ್ರವನ್ನು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಲಕ್ಷಾಂತರ ಮಂದಿ ಮುಂಬೈ ಮೇಲು ಸೇತುವೆ ಕೆಳಗೆ ಪ್ರತಿಭಟನೆ ಮೆರವಣಿಗೆ ನಡೆಸುತ್ತಿದ್ದಾರೆ ಎಂದು ಬರೆದು ವೈರಲ್​ ಮಾಡಲಾಗಿತ್ತು. ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆಗೂ ಹಾಗೂ ವೈರಲ್​ ಆದ ಫೋಟೋಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಪತ್ತೆಯಾಗಿದೆ.

 

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...