'ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ' ಚಿತ್ರಕ್ಕೆ ನಟಿ ಅನುಷ್ಕಾ ಶೆಟ್ಟಿ ಪಡೆದ ಸಂಭಾವನೆ ಎಷ್ಟು ಗೊತ್ತಾ?

Untitled design (14) (1)
Published on

ಆಂಧ್ರಪ್ರದೇಶ: ಕೆಲವು ವರ್ಷಗಳ ನಂತರ ಮತ್ತೊಮ್ಮೆ ಚಿತ್ರರಂಗಕ್ಕೆ 'ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ' ಎಂಬ ಹೊಸ ಚಿತ್ರದ ಮುಖೇನ ಮರಳಿರುವ ಟಾಲಿವುಡ್​ ಬ್ಯೂಟಿ, ನಟಿ ಅನುಷ್ಕಾ ಶೆಟ್ಟಿ, ಇದೀಗ ತಮ್ಮ ಅಭಿಮಾನಿಗಳು ಮತ್ತು ಸಿನಿರಸಿಕರನ್ನು ಮನರಂಜಿಸಲು ಮುಂದಾಗಿದ್ದಾರೆ.

ಅನುಷ್ಕಾ ಶೆಟ್ಟಿ ನಟನೆಯ ಬಹುನಿರೀಕ್ಷಿತ ಚಿತ್ರದ ಬಿಡುಗಡೆಗೆ ಇದೀಗ ಕ್ಷಣಗಣನೆ ಆರಂಭಗೊಂಡಿದ್ದು, ಈ ಚಿತ್ರದಲ್ಲಿ ನಟಿಸಲು ಅವರು ಭಾರೀ ಮೊತ್ತದ ಸಂಭಾವನೆ ಪಡೆದುಕೊಂಡಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿವೆ. ದೊಡ್ಡ ವಿರಾಮದ ನಂತರ ಚಿತ್ರರಂಗಕ್ಕೆ ಕಂಬ್ಯಾಕ್​ ಮಾಡಿರುವ ಅನುಷ್ಕಾ, 'ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ' ಚಿತ್ರಕ್ಕಾಗಿ ಬರೋಬ್ಬರಿ 6 ಕೋಟಿ ರೂ. ಸಂಭಾವನೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸದ್ಯ ಈ ಸಂಗತಿ ಕೇವಲ ಊಹಾಪೋಹವಾಗಿದ್ದು, ಈ ಬಗ್ಗೆ ಚಿತ್ರತಂಡದಿಂದ ಅಥವಾ ಯಾವುದೇ ಮೂಲದಿಂದ ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ. ಮಹೇಶ್ ಪಿ. ನಿರ್ದೇಶನದ ರೋಮ್ಯಾಂಟಿಕ್-ಕಾಮಿಡಿ ಜಾನರ್​ನ ಈ ಚಿತ್ರವನ್ನು ಯುವಿ ಕ್ರಿಯೇಷನ್ಸ್ ನಿರ್ಮಿಸಿದೆ. ಚಿತ್ರದಲ್ಲಿ ನವೀನ್ ಪೋಲಿಶೆಟ್ಟಿ ಮತ್ತು ಅನುಷ್ಕಾ ಶೆಟ್ಟಿ ನಾಯಕ-ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರವು ಸೆಪ್ಟೆಂಬರ್ 7, 2023 ರಂದು ಬಹುತೇಕ ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಗೊಳ್ಳಲು ಸಜ್ಜಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net