More

    ವಿಶ್ವಕಪ್​ ಕ್ರಿಕೆಟ್ ಸೆಮಿಫೈನಲ್​​: ‘ನವ’ಚೈತನ್ಯದಲ್ಲಿ ಭಾರತ; ಕಾರ್ಯತಂತ್ರದ ಕುರಿತು ರಾಹುಲ್ ದ್ರಾವಿಡ್ ಹೇಳಿದ್ದೇನು?

    ಬೆಂಗಳೂರು: ರಾಜಧಾನಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಏಕದಿನ ವಿಶ್ವಕಪ್​​ ಟೂರ್ನಿಯ 45ನೇ ಪಂದ್ಯ ಹಾಗೂ ಉಭಯ ತಂಡಗಳ ಗ್ರೂಪ್​ ಹಂತದ ಕೊನೆಯ ಪಂದ್ಯದಲ್ಲಿ ಆತಿಥೇಯ ಭಾರತ ಎದುರಾಳಿ ನೆದರ್ಲೆಂಡ್ಸ್​ ವಿರುದ್ಧ ಭಾರಿ ರನ್​ಗಳ​ ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸಿದೆ.

    ಈ ಮೂಲಕ ನೆದರ್ಲೆಂಡ್ಸ್ ತಂಡ ವಿಶ್ವಕಪ್​​ ಪಂದ್ಯಾವಳಿಯಿಂದ ಹೊರ ನಡೆದಿದ್ದರೆ, ವಿಶ್ವಕಪ್​ ಟೂರ್ನಿಯಲ್ಲಿ 9ನೇ ಗೆಲುವಿನ ‘ನವ’ಚೈತನ್ಯದೊಂದಿಗೆ ತನ್ನ ಅಜೇಯ ಓಟವನ್ನು ಭಾರತ ತಂಡ ಮುಂದುವರಿಸಿದೆ.

    ಮಾತ್ರವಲ್ಲ, ಎಲ್ಲ ಪಂದ್ಯಗಳಲ್ಲೂ ಗೆದ್ದು, ಸೆಮಿಫೈನಲ್​ಗೆ ಸಜ್ಜಾಗಿರುವ ಭಾರತ ತಂಡ ಇಡೀ ವಿಶ್ವಕಪ್​ನ ಆಕರ್ಷಣೆಯ ಕೇಂದ್ರವಾಗಿದ್ದು, ಅತ್ಯಂತ ಪ್ರಬಲ ತಂಡ ಎಂಬ ಹೆಗ್ಗಳಿಕೆಯನ್ನೂ ಹೊಂದಿದೆ. ಸೆಮಿಫೈನಲ್​ನಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ಎದುರು ಸೆಣಸಾಡಲಿದೆ.

    ಇದನ್ನೂ ಓದಿ: 13 ಭಾಷೆಗಳಲ್ಲಿ ದೀಪಾವಳಿ ಶುಭಾಶಯ ಕೋರಿ ‘ಸಂಪ್ರದಾಯಗಳನ್ನು ಜೀವಂತವಾಗಿಡಿ’ ಎಂದ ಗೂಗಲ್

    ಸೆಮಿಫೈನಲ್​ನಲ್ಲಿ ಭಾರತ ತಂಡದ ಸ್ಟ್ರ್ಯಾಟೆಜಿ ಏನಿರಲಿದೆ ಎಂಬ ಕುರಿತು ಇದೀಗ ಕೋಚ್ ರಾಹುಲ್ ದ್ರಾವಿಡ್ ಮಾತನಾಡಿದ್ದು, ಒಂದಷ್ಟು ಅಂಶಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ವಿಶ್ವಕಪ್​ನಲ್ಲಿ ಭಾರತದ್ದು ಇದುವರೆಗೆ ಇದೇ ಬೆಸ್ಟ್ ಪರ್ಫಾರ್ಮೆನ್ಸ್ ಆಗಿದ್ದು, ಮೊದಲ ಬಾರಿಗೆ ವಿಶ್ವಕಪ್​ನಲ್ಲಿ ಭಾರತ ತಂಡ 9 ಪಂದ್ಯಗಳಲ್ಲಿ ಗೆದ್ದಿದೆ ಎಂದು ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.

    ಈ ಹಿಂದೆ ವಿಶ್ವಕಪ್​ನಲ್ಲಿ ಭಾರತ ಎರಡು ಸಲ 8 ಪಂದ್ಯಗಳಲ್ಲಿ ಗೆದ್ದಿತ್ತು. ಆಸ್ಟ್ರೇಲಿಯಾ ತಂಡ 11 ಪಂದ್ಯಗಳಲ್ಲಿ ಗೆದ್ದಿತ್ತು. ಹೀಗಾಗಿ ಈಗಾಗಲೇ ಎಲ್ಲ ಪಂದ್ಯಗಳಲ್ಲಿ ಗೆದ್ದು ಜೋಶ್​ನಲ್ಲಿರುವ ಭಾರತಕ್ಕೆ ಆಸ್ಟ್ರೇಲಿಯಾದ ದಾಖಲೆ ಮುರಿಯುವ ಅವಕಾಶ ಕೂಡ ಇದೆ ಎಂದಿದ್ದಾರೆ.

    ಇನ್ನು ತಮ್ಮ ಕಾರ್ಯತಂತ್ರದ ಕುರಿತು ಮಾತನಾಡಿರುವ ಅವರು, ಈಗಾಗಲೇ ಯೋಜನೆ ಹಾಕಿಕೊಂಡಿರುವಂತೆಯೇ ಎಲ್ಲವೂ ನಡೆಯಲಿದೆ. ಹೊಸದಾಗಿ ಬೇರೆ ಸ್ಟ್ರ್ಯಾಟೆಜಿ ಏನೂ ಇಲ್ಲ ಎಂದಿದ್ದಾರೆ. ಇದುವರೆಗೆ ಎಲ್ಲರೂ ಜವಾಬ್ದಾರಿ ಅರಿತು ಚೆನ್ನಾಗಿ ಆಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧವೂ ತಮ್ಮ ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂದಿರುವ ಅವರು ಗೆಲ್ಲುವ ವಿಶ್ವಾಸ ಕೂಡ ವ್ಯಕ್ತಪಡಿಸಿದ್ದಾರೆ.

    ಸೆಮೀಸ್​ನಲ್ಲಿ ಮುಖಾಮುಖಿಯಾಗುವ ತಂಡಗಳು

    ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್​ ಸಮೀಸ್​ ಪ್ರವೇಶ ಪಡೆದಿದ್ದು, ನವೆಂಬರ್​ 15ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಸಮಿಫೈನಲ್​ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತ ಮತ್ತು ನಾಲ್ಕನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್​ ಮುಖಾಮುಖಿಯಾಗಲಿವೆ. ನ.16ರಂದು ಕೋಲ್ಕತದ ಈಡನ್​ ಗಾರ್ಡನ್​ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸಮಿಫೈನಲ್​ನಲ್ಲಿ ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಮತ್ತು ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.

    ನ.19ಕ್ಕೆ ವಿಶ್ವಕಪ್​ ಹಬ್ಬಕ್ಕೆ ವಿದ್ಯುಕ್ತ ತೆರೆ

    ಎರಡೂ ಸಮಿಫೈನಲ್​ಗಳಲ್ಲಿ ಗೆಲ್ಲುವ ತಂಡಗಳು ನ. 19ರಂದು ಗುಜರಾತಿನ ಅಹಮದಾಬಾದ್​ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟ್ರೋಫಿಗಾಗಿ ನಡೆಯಲಿರುವ ಅಂತಿಮ ಹಾಗೂ ಫೈನಲ್​ ಪಂದ್ಯದಲ್ಲಿ ಸೆಣಸಾಡಲಿದ್ದು, ಗೆಲ್ಲುವ ತಂಡ ವಿಶ್ವಕಪ್​ ಟ್ರೋಫಿಯ ಜತೆಗೆ 4 ಮಿಲಿಯನ್​ ಡಾಲರ್ (33,30,89,400 ರೂಪಾಯಿ) ಬಹುಮಾನ ಮೊತ್ತವನ್ನು ಪಡೆಯಲಿದೆ. ರನ್ನರ್​ ಅಪ್​ ತಂಡಗಳು 2 ಮಿಲಿಯನ್​ ಡಾಲರ್​ ಬಹುಮಾನ ಮೊತ್ತ ಹಾಗೂ ಲೀಗ್​ ಹಂತದಲ್ಲಿ ವಿಜೇತರಾದ ಪ್ರತಿ ತಂಡಕ್ಕೆ ತಲಾ 40 ಸಾವಿರ ಡಾಲರ್​ ಬಹುಮಾನ ಮೊತ್ತವನ್ನು ಪಡೆಯಲಿವೆ. (ಏಜೆನ್ಸೀಸ್​)

    ದೇಶವೇ ದೀಪಗಳಿಂದ ಜಗಮಗ; ಇಲ್ಲಿ ಮಾತ್ರ 230 ವರ್ಷಗಳಿಂದ ದೀಪಾವಳಿ ಆಚರಿಸಿಲ್ಲ!

    ಇಲ್ಲಿ ‘ಯಮದೂತ’ನಿಗೇ ಪೂಜೆ ಮಾಡಿ ದೀಪಾವಳಿ ಹಬ್ಬ ಆಚರಣೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts