More

    ‘ಕೇಂದ್ರ ಸರ್ಕಾರ ಏನು ಮಾಡುತ್ತಿದೆ? ಯಾವ ಆಯೋಗ ರಚನೆಯಾಗಿದೆ?’ ಟ್ರಂಪ್​ ಭೇಟಿ ನಿಮಿತ್ತ ಖರ್ಚಾಗುತ್ತಿರುವ ಹಣದ ಬಗ್ಗೆ ಪ್ರಿಯಾಂಕಾ ಗಾಂಧಿ ಅನುಮಾನ

    ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಭಾರತಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್​ನ ಅಹಮದಾಬಾದ್​, ಆಗ್ರಾಗಳಲ್ಲೆಲ್ಲ ಭರ್ಜರಿ ಸಿದ್ಧತೆ ನಡೆಯುತ್ತಿದೆ.

    ಈ ಸಿದ್ಧತೆಗಳಿಗೆ ಖರ್ಚಾಗುತ್ತಿರುವ ಹಣದ ಬಗ್ಗೆ ಈಗಾಗಲೇ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.
    ಇದೀಗ ಕಾಂಗ್ರೆನ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಟ್ರಂಪ್​ ಭೇಟಿ ಮತ್ತು ಅದರ ಸಿದ್ಧತೆಗಾಗಿ ವೆಚ್ಚ ಮಾಡುತ್ತಿರುವ ಹಣದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಏನನ್ನು ಮುಚ್ಚಿಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

    ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆಂದು ಸಿದ್ಧತೆಗಾಗಿ ಕೇಂದ್ರ ಸರ್ಕಾರ 100 ಕೋಟಿ ರೂಪಾಯಿಯನ್ನು ಖರ್ಚು ಮಾಡುತ್ತಿದೆ. ಹಣದ ಬಳಕೆ ಮಾಡುವ ಸಂಬಂಧ ಆಯೋಗವನ್ನು ರಚಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಆ ಆಯೋಗ ಯಾವುದು? ಅದರಲ್ಲಿ ಯಾರ್ಯಾರೆಲ್ಲ ಇದ್ದಾರೆ? ನಮಗೆ ಯಾರಿಗೂ ಗೊತ್ತಿಲ್ಲ. ಈ ಸರ್ಕಾರ ಜನರಿಂದ ಏನನ್ನು ಮುಚ್ಚಿಡುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts