More

    ಜನರಿಗೆ ಬೇಕಾಗಿರೋದು ಅಕ್ಕಿ ಅಲ್ಲ, ಸ್ವಾಭಿಮಾನದ ಬದುಕು: ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಗೋವಿಂದ ಕಾರಜೋಳ ತಿರುಗೇಟು

    ಬೆಳಗಾವಿ: ಮುಖ್ಯಮಂತ್ರಿ ಆದ್ರೆ ಜನರಿಗೆ ಉಚಿತ ಎಲ್ಲಾ ವಸ್ತುಗಳನ್ನು ಕೊಡುತ್ತೇವೆ ಎಂದು ಕಾಂಗ್ರೆಸ್​ ಸರ್ಕಾರ ದಶಕಗಳಿಂದಲೂ ಮೋಸಗಾರಿಕೆ ಮಾಡಿಕೊಂಡೇ ಆಡಳಿತ ಮಾಡಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

    ಸಿಎಂ ಆದ್ರೆ ಸಾಲಮನ್ನಾ ಮಾಡುತ್ತೇನೆ, 10 ಕೆಜಿ ಅಕ್ಕಿ ನೀಡ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಜನರಿಗೆ ನಿಮ್ಮ ಉಚಿತ ವಸ್ತುಗಳು ಬೇಕಾಗಿಲ್ಲ, ಮೊದಲು ಸ್ವಾಭಿಮಾನದಿಂದ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಪ್ರತಿಕ್ರಿಯಿಸಿದರು.

    ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಬಿಜೆಪಿಯಲ್ಲಿ ಬಣ ರಾಜಕೀಯ ಇಲ್ಲವೇ ಇಲ್ಲ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ. ಕೆಲ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಗಳಿರುತ್ತವೆ. ಹಾಗಂತೆ ಬಣ ರಾಜಕೀಯ ಎಂದು ಬಾವಿಸಿಕೊಳ್ಳುವುದು ತಪ್ಪು ಎಂದರು.

    ಜನರಿಗೆ ಬೇಕಾಗಿರೋದು ಅಕ್ಕಿ ಅಲ್ಲ, ಸ್ವಾಭಿಮಾನದ ಬದುಕು: ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಗೋವಿಂದ ಕಾರಜೋಳ ತಿರುಗೇಟು

    ಇದೇ ಮೋಸಗಾರಿಕೆ ಮಾಡಿಕೊಂಡು ದೇಶದಲ್ಲಿ ಕಾಂಗ್ರೆಸ್ ಆಡಳಿತ ಮಾಡಿದೆ2023ರ ಚುನಾವಣೆಯಲ್ಲಿ ರಾಜ್ಯದಲ್ಲಿ, 2024ರಲ್ಲಿ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಜನರಿಗೆ ಬೇಕಾದ ಎಲ್ಲಾ ಅಗತ್ಯತೆಗಳನ್ನು ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಜನರಿಗೆ ಬೇಕಾಗಿರೋ ಅಕ್ಕಿ ಅಲ್ಲ ಸ್ವಾಭಿಮಾನದ ಬದುಕು.ಬಿಜೆಪಿ ಭ್ರಷ್ಟ ಸರ್ಕಾರ ಎಂದು ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ ಅವರು, ಸುಳ್ಳು ಹೇಳುತ್ತಲೆ ಕಾಂಗ್ರೆಸ್ ಖಾಲಿಯಾಗಲಿದೆ ಇನ್ನು ಹೇಳಲು ಏನಿದೆ ಎಂದು ಹೇಳಿದ್ದಾರೆ.

    ರಾಜಕೀಯ ಪಕ್ಷಗಳಲ್ಲಿ ಭಿನ್ನಾಭಿಪ್ರಾಯ ಗಳು ಸಹಜ. ಆದರೆ, ಆದರೆ, ಬಿಜೆಪಿಯಲ್ಲಿ ಬಣ ರಾಜಕೀಯ ಇಲ್ಲ. ಜಾರಕಿಹೊಳಿ, ಕತ್ತಿ ಸಹೋದರು ಸೇರಿದಂತೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

    ವಾಯವ್ಯ ಪದವಿ‌ ಮತ್ತು ಶಿಕ್ಷಕರ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳೇ ಬಿಜೆಪಿ ಗೆಲುವಿಗೆ ಶ್ರೀರಕ್ಷೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಜಿಲ್ಲೆಯಲ್ಲಿ ಶೇ.೧೦ರಷ್ಟು ಹಾನಿ: ಮಳೆ ಬರೋದು ಸಂತೋಷ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಮಳೆಯಿಂದ ಕಬ್ಬು ಬೆಳೆಗೆ ಅನಕೂಲ ಆಗಿದೆ.ಶೇ‌ ೧೦ ರಷ್ಟು ಜನರಿಗೆ ತೊಂದರೆ ಆಗಿದೆ. ತೊಂದೆರೆಯಾದ ರೈತರ ಸ್ಪಂಧನೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

    ಸಚಿವೆ ಶಶಿಕಲಾ ಜೊಲ್ಲೆ, ಎಂಎಲ್ ಸಿಗಳಾದ ಹನುಮಂತ ನಿರಾಣಿ, ರವಿಕುಮಾರ ಇತರರಿದ್ದರು.

    ಜ್ಞಾನವಾಪಿಯಲ್ಲಿ ಸಿಕ್ಕ ಶಿವಲಿಂಗದ ಬಗ್ಗೆ ಈ ರೀತಿ ಹೇಳಿ ಬಂಧನಕ್ಕೊಳಗಾದ ಇತಿಹಾಸಕಾರ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts