More

    ಜಟಾಪಟಿಗೆ ಸಾಕ್ಷಿ ಆಯ್ತು ಜನಪ್ರತಿನಿಧಿಗಳ ಸಭೆ; ಮುಂದಿನ ಕ್ರಮಗಳ‌ ಬಗ್ಗೆ ನಾಳೆ ನಿರ್ಣಯ..

    ಬೆಂಗಳೂರು: ಕಾಡ್ಗಿಚ್ಚಿನಂತೆ ಕರೊನಾ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಸರ್ಕಾರ ಮುಂದೇನು ಮಾಡಬೇಕೆಂಬ ಬಗ್ಗೆ ಬೆಂಗಳೂರಿನ‌ ಶಾಸಕ-ಸಂಸದರು ಹಲವು ಸಲಹೆ ನೀಡಿದ್ದಾರೆ.

    ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಶಾಸಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಇಷ್ಟು ದಿನ ಕಳೆದರೂ ವ್ಯವಸ್ಥೆ ಇಲ್ಲದೆ ಜನರು ಪರದಾಡುತ್ತಿದ್ದಾರೆ, ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನೆಗಳನ್ನೆಸೆದರು. ಈ ವೇಳೆ ಕಳೆದ ಒಂದು ವರ್ಷದ ಹಿಂದೆ ಮೂಲಸೌಕರ್ಯ ಹೇಗಿತ್ತು, ಈಗ ಏನೆಲ್ಲ ಬದಲಾವಣೆ ಆಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ವಿವರಣೆ ನೀಡುತ್ತಿದ್ದಂತೆ ಪ್ರತಿಪಕ್ಷ ಸದಸ್ಯರ ಆಕ್ರೋಶ ಹೆಚ್ಚಾಯಿತು.

    ಈ ನಡುವೆ ಶಾಸಕರು ಹಲವು ಸಲಹೆ ನೀಡಿದ್ದಾರೆ. ಆಹಾರವಾಗಲಿ ಅಥವಾ ಔಷಧವಾಗಲಿ ನ್ಯಾಯಯುತವಾಗಿ ವಿತರಿಸಿ. ರಾಜ್ಯದಲ್ಲಿ ಒಂದೆಡೆ ಹಾಸಿಗೆ ಇಲ್ಲ, ಮತ್ತೊಂದೆಡೆ ತೀವ್ರ ನಿಗಾ ಘಟಕದಲ್ಲಿ ಸ್ಥಳಾವಕಾಶ ಇಲ್ಲ, ಮಗದೊಂದೆಡೆ ಆಮ್ಲಜನಕದ ದಾಸ್ತಾನು ಇಲ್ಲ ಎಂಬ ಭಯಾನಕ ಪರಿಸ್ಥಿತಿ ಉಂಟಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಬೆಂಗಳೂರು ನಗರದಲ್ಲಿ ಕನಿಷ್ಠ 25,000 ಹಾಸಿಗೆಗಳನ್ನು ವ್ಯವಸ್ಥೆ ಮಾಡಿ ಎಂದು ರಾಮಲಿಂಗಾರೆಡ್ಡಿ ಸಲಹೆ ನೀಡಿದರು.

    ಇದನ್ನೂ ಓದಿ: ಕೋವಿಡ್​ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ ಎಂಬ ಚಿಂತೆಯೇ?; ಇಲ್ಲಿದೆ ನೋಡಿ ರಿಯಲ್ ಟೈಮ್ ಮಾಹಿತಿ 

    ಮನೆಯಲ್ಲಿ ದಿಗ್ಬಂಧನದಲ್ಲಿರುವ (ಹೋಮ್ ಐಸೋಲೇಷನ್) ಜನರು ರಸ್ತೆಗಳಲ್ಲಿ ಓಡಾಡುತ್ತಿದ್ದಾರೆ. ಲಾಕ್​ಡೌನ್​ಗಿಂತಲೂ ದಂಡಪ್ರಕ್ರಿಯ ಸಂಹಿತೆ ಪರಿಚ್ಛೇಧ 144 ಜಾರಿ ಮಾಡಿ ಗುಂಪು ಸೇರುವುದನ್ನು ತಡೆಯುವುದು ಉತ್ತಮ. ಕಲ್ಯಾಣ ಮಂಟಪ, ಸಮುದಾಯ ಭವನ, ಮಾರುಕಟ್ಟೆಗಳಲ್ಲಿ ಜನಸಂದಣಿ ನಿಯಂತ್ರಿಸಿ, ನೈಟ್ ಕರ್ಫ್ಯೂ ಸಮಯ ಬದಲಾವಣೆ ಅಗತ್ಯವಿಲ್ಲ, ಕೊಳಗೇರಿಗಳಲ್ಲಿ ಲಸಿಕಾ ಆಭಿಯಾನಕ್ಕೆ ಒತ್ತು ಕೊಡಿ ಎಂಬ ಸಲಹೆಗಳು ವ್ಯಕ್ತವಾದವು.

    ಅಂತಿಮವಾಗಿ ವರ್ಚವಲ್ ಆಗಿ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಎಲ್ಲರ ಸಲಹೆ ಪರಿಗಣಿಸಿ ನಾಳಿನ ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡಿ ಪರಿಸ್ಥಿತಿ ನಿಯಂತ್ರಣಕ್ಕೆ ಏನು ಮಾಡಬೇಕೆಂದು ತೀರ್ಮಾನ ಪ್ರಕಟಿಸುತ್ತೇವೆ ಎಂದರು.

    ಅಮ್ಮ ಸಾಯ್ತಿದಾರೆ ಎಂದು ಬೇಡ್ಕೊಂಡ್ರೂ ಒಂದ್ ಹಾಸಿಗೆ ಅರೇಂಜ್​ ಮಾಡೋಕ್​ ಆಗ್ತಿಲ್ಲ; ಪ್ಲೀಸ್​.. ಹೊರಗೆ ಹೋಗೋ ಮುಂಚೆ 100 ಸಲ ಯೋಚ್ನೆ ಮಾಡಿ..

    ಸಾರಿಗೆ ನೌಕರರನ್ನು ಮುಷ್ಕರಕ್ಕೆ ಪ್ರಚೋದಿಸಿದ ಆರೋಪದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೇಸ್​ ದಾಖಲು​

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts