22.8 C
Bengaluru
Saturday, January 18, 2020

ವಾಟ್ಸ್​ಆ್ಯಪ್ ಬಳಕೆದಾರರಿಗೆ ಶಾಕಿಂಗ್​ ನ್ಯೂಸ್​: ಮುಂದಿನ ವರ್ಷದಿಂದ ಈ ಸ್ಮಾರ್ಟ್​ಫೋನ್​ಗಳಲ್ಲಿ ವಾಟ್ಸ್​ಆ್ಯಪ್ ಕಾರ್ಯನಿರ್ವಹಿಸುವುದಿಲ್ಲ!

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ನವದೆಹಲಿ: ಹಲವು ಸ್ಮಾರ್ಟ್​ಫೋನ್​ಗಳಲ್ಲಿ ವಾಟ್ಸ್​ಆ್ಯಪ್​ ಕಾರ್ಯನಿರ್ವಹಿಸಲು ಇನ್ನು ಕೆಲವೇ ದಿನಗಳು ಬಾಕಿ ಇದೆ. ಆ್ಯಪ್​ನಲ್ಲಿನ ಎಫ್​ಎಕ್ಯು(FAQ) ವಿಭಾಗವನ್ನು ಅಪ್ಡೇಟ್​ ಮಾಡುತ್ತಿರುವುದರಿಂದ ಅನೇಕ ಆಂಡ್ರಾಯ್ಡ್​ ಮತ್ತು ಐಒಎಸ್​ ಫೋನ್​ಗಳಲ್ಲಿ ಆ್ಯಪ್​ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಫೆಬ್ರವರಿ 1, 2020ಕ್ಕೆ ಹಳೆಯ ಮೊಬೈಲ್​ ಫೋನ್​ಗಳಿಗೆ ನೀಡಲಾಗಿದ್ದ ಆ್ಯಪ್​ ಬೆಂಬಲವನ್ನು ಕಂಪನಿ ವಾಪಸ್​ ಪಡೆದುಕೊಳ್ಳುತ್ತಿದೆ.

ಸದ್ಯದ ಮಾಹಿತಿ ಪ್ರಕಾರ ಆಂಡ್ರಾಯ್ಡ್​ 2.3.7 ಆಪರೇಟಿಂಗ್​ ಸಿಸ್ಟಮ್​ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಂಡ್ರಾಯ್ಡ್​ ಫೋನ್​ಗಳು ಮತ್ತು ಐಒಎಸ್​ 7(iOS 7) ಸಿಸ್ಟಮ್​ನ ಐಫೋನ್​ಗಳಲ್ಲಿ ಮುಂದಿನ ವರ್ಷದಿಂದ ವಾಟ್ಸ್​ಆ್ಯಪ್ ​ ಕಾರ್ಯನಿರ್ವಹಿಸುವುದಿಲ್ಲ.

ಇದಲ್ಲದೆ, ಹಳೆಯ ಆಪರೇಟಿಂಗ್​ ಸಿಸ್ಟಮ್​ನ ಆಂಡ್ರಾಯ್ಡ್​ ಮತ್ತು ಐಒಎಸ್​ ಫೋನ್​ಗಳಲ್ಲಿ 2020ರ ಫೆಬ್ರವರಿ 1ರ ಬಳಿಕ ಹೊಸ ಖಾತೆಗಳನ್ನು ತೆರೆಯುವುದಾಗಲಿ ಅಥವಾ ಈಗಿರುವ ಖಾತೆಗಳನ್ನು ಮರು ಪರಿಶೀಲಿಸಲು ಸಾಧ್ಯವಾಗುವುದಿಲ್ಲ. ಇನ್ನು ಹೆಚ್ಚುವರಿಯಾಗಿ 2019ರ ಡಿಸೆಂಬರ್​ 31ರಿಂದಲೇ ವಿಂಡೋಸ್​ ಫೋನ್​ಗಳಿಗೆ ನೀಡಲಾಗಿದ್ದ ಬೆಂಬಲವನ್ನು ವಾಟ್ಸ್​ಆ್ಯಪ್​ ಹಿಂಪಡೆದುಕೊಳ್ಳಲಿದೆ. ಇದೇ ತಿಂಗಳು ಮೈಕ್ರೋಸಾಫ್ಟ್​ ತನ್ನ ವಿಂಡೋಸ್​ 10 ಮೊಬೈಲ್​ ಆಪರೇಟಿಂಗ್​ ಸಿಸ್ಟಮ್​ಗೆ ನೀಡಿದ್ದ ವಾಟ್ಸ್​ಆ್ಯಪ್ ಬೆಂಬಲಕ್ಕೆ ಅಂತ್ಯಹಾಡಲಿದೆ. ಆದರೆ, ವಿಂಡೋಸ್​ ಸ್ಮಾರ್ಟ್​ಫೋನ್​ ಹೊಂದಿರುವವರು ತಮ್ಮ ಮಾಹಿತಿಗಳನ್ನು ಕಳೆದುಕೊಳ್ಳುವ ಭೀತಿಗೆ ಒಳಗಾಗಬೇಕಿಲ್ಲ. ಬದಲಾಗಿ ಎಲ್ಲವನ್ನು ಸೇವ್​ ಮಾಡಿಕೊಳ್ಳುವ ಆಯ್ಕೆಯನ್ನು ನೀಡಲಾಗಿದೆ. ಎಕ್ಸ್​ಪೋರ್ಟ್​ ಆಯ್ಕೆಯ ಮೂಲಕ ತಮ್ಮ ಎಲ್ಲ ಮಾಹಿತಿಗಳನ್ನು ಮೊಬೈಲ್​ನಲ್ಲಿ ಸೇವ್​ ಮಾಡಿಕೊಳ್ಳಬಹುದಾಗಿದೆ.

# ಮುಂದಿನ ವರ್ಷದಿಂದ ಈ ಕೆಳಗಿನ ಆಪರೇಟಿಂಗ್​ ಸಿಸ್ಟಮ್​ ವಾಟ್ಸ್​ಆ್ಯಪ್ ಕಾರ್ಯನಿರ್ವಹಿಸುವುದಿಲ್ಲ

1. ಆಂಡ್ರಾಯ್ಡ್​ 2.3.7 ಮತ್ತು ಹಳೆಯ ಫೋನ್​ಗಳು

2. ಐಒಎಸ್​ 8 ಮತ್ತು ಹಳೆಯ ಫೋನ್​ಗಳು

3. ಎಲ್ಲ ವಿಂಡೋಸ್​ ಆಪರೇಟಿಂಗ್​ ಸಿಸ್ಟಮ್​ (ಡಿಸೆಂಬರ್​ 31, 2019)


# ವಾಟ್ಸ್​ಆ್ಯಪ್ ​ ಕಾರ್ಯನಿರ್ವಹಿಸುವ ಆಪರೇಟಿಂಗ್​ ಸಿಸ್ಟಮ್​

1. 4.0.3+ ಆಪರೇಟಿಂಗ್​ ಸಿಸ್ಟಮ್​ನ ಆಂಡ್ರಾಯ್ಡ್​ ಫೋನ್​ಗಳು

2. ಐಒಎಸ್​ 9+ ಆಪರೇಟಿಂಗ್​ ಸಿಸ್ಟಮ್​ನ ಐಫೋನ್​

3. ಜಿಯೋ ಫೋನ್​ ಮತ್ತು ಜಿಯೋ ಫೋನ್​ 2 ಸೇರಿದಂತೆ KaiOS 2.5.1+ ಆಪರೇಟಿಂಗ್​ ಸಿಸ್ಟಮ್​ನಲ್ಲಿ ಕಾರ್ಯನಿರ್ವಹಿಸುವ ಕೆಲ ಆಯ್ದ ಫೋನ್​ಗಳು (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...