More

  ಅಂಗವಿಕಲರಿಗೆ ವ್ಹೀಲ್‌ಚೇರ್ ವ್ಯವಸ್ಥೆ

  ಅರಕಲಗೂಡು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಸಿಬ್ಬಂದಿಗೆ ಮತಯಂತ್ರ ಮತ್ತು ಚುನಾವಣಾ ಸಾಮಗ್ರಿ ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆಯಿತು.

  ಚುನಾವಣಾಧಿಕಾರಿ ಧರ್ಮಪಾಲ್ ಮಾತನಾಡಿ, ಚುನಾವಣಾ ಆಯೋಗದ ಮಾರ್ಗಸೂಚಿ ಮತ್ತು ಮನದಂಡಗಳ ಪ್ರಕಾರ ಕ್ರಮ ವಹಿಸಲಾಗಿದೆ. ಅರಕಲಗೂಡು ಕ್ಷೇತ್ರದಲ್ಲಿ 283 ಮತಗಟ್ಟೆಗಳಿದ್ದು, 1132 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

  1 ಮತಗಟ್ಟೆ ಕೇಂದ್ರಕ್ಕೆ ನಾಲ್ವರು ಸಿಬ್ಬಂದಿಯನ್ನು ನೇಮಿಸಿದ್ದು, ಮೂಲ ಸೌಕರ್ಯ ಒದಗಿಸಲಾಗಿದೆ. ಸಿಬ್ಬಂದಿ ಅನಾರೋಗ್ಯಕ್ಕೀಡಾದರೆ ಪರ್ಯಾಯವಾಗಿ ಹೆಚ್ಚುವರಿಯಾಗಿ 56 ಸಿಬ್ಬಂದಿಯನ್ನು ನೇಮಿಕ ಮಾಡಲಾಗಿದೆ. ಈಗಾಗಲೇ ಎಲ್ಲ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಲಾಗಿದೆ ಎಂದು ಹೇಳಿದರು.

  ಮಹಿಳೆಯರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಪಟ್ಟಣದ ಹೆಂಟಗೆರೆ, ಸಾಲಗೇರಿ, ಹಂಪಾಪುರ, ಹುಲಿಕಲ್ಲು, ರಾಮನಾಥಪುರದಲ್ಲಿ ಪಿಂಕ್ ಬೂತ್ ತೆರೆಯಲಾಗಿದೆ. ಅಂಗವಿಕಲರಿಗೆ ಅನುಕೂಲವಾಗುವಂತೆ ವ್ಹೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ. ಕ್ಷೇತ್ರದಲ್ಲಿ 723 ಹಿರಿಯ ನಾಗರಿಕರಿದ್ದು, ಮನೆ ಮನೆ ತೆರಳಿ 694 ಜನರಿಂದ ಮತದಾನ ಮಾಡಿಸಲಾಗಿದೆ ಎಂದು ತಿಳಿಸಿದರು.

  ಕ್ಷೇತ್ರದಲ್ಲಿ 2.30 ಲಕ್ಷ ಮತದಾರರಿದ್ದು, ಅದರಲ್ಲಿ 1,17,449 ಮಂದಿ ಪುರುಷರು, 1,13,389 ಮಹಿಳೆಯರು ಹಾಗೂ 5 ಇತರರು ಇದ್ದಾರೆ ಎಂದು ಮಾಹಿತಿ ನೀಡಿದರು. ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts