

ಆಂಧ್ರಪ್ರದೇಶ: ತೆಲುಗು ಚಿತ್ರರಂಗದ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ 'ಬ್ರೋ' ಚಿತ್ರದ ಪ್ರಿ-ರಿಲೀಸ್ ಈವೆಂಟ್ಗೆ ಅಧಿಕೃತ ದಿನಾಂಕ ನಿಗದಿಯಾಗದಿದ್ದರೂ, ಇದೇ ದಿನದಂದು ಕಾರ್ಯಕ್ರಮ ನಡೆಯಲಿದೆ ಎಂಬ ಊಹಾಪೋಹ ಸದ್ಯ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.
ನಟ, ರಾಜಕಾರಣಿ ಪವನ್ ಕಲ್ಯಾಣ್ ಅವರ ಮುಂದಿನ ಚಿತ್ರ 'ಬ್ರೋ', ಫ್ಯಾಂಟಸಿ ಮತ್ತು ಕಾಮಿಡಿ ಜಾನರ್ ಆಗಿದ್ದು, ಸಮುದ್ರಕನಿ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಪವನ್ ಕಲ್ಯಾಣ್ ಮತ್ತು ಸಾಯಿ ಧರಮ್ ತೇಜ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ಥಮನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರತಂಡ ನೀಡಿರುವ ಮಾಹಿತಿ ಅನುಸಾರ, ಚಿತ್ರವನ್ನು ಇದೇ ಜುಲೈ 28, 2023 ರಂದು ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳಿಸಲು ಚಿತ್ರತಂಡ ಸಜ್ಜಾಗಿದೆ.
ಸದ್ಯ ಬ್ರೋ ಪ್ರೀ-ರಿಲೀಸ್ ಈವೆಂಟ್ ಹಮ್ಮಿಕೊಳ್ಳುವ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಪ್ರಕಟಿಸದಿದ್ದರೂ, ಈವೆಂಟ್ ಜುಲೈ 25, 2023 ರಂದು ನಡೆಯಲಿದೆ ಎಂಬ ಊಹಾಪೋಹ ಸದ್ಯ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಪವನ್ ಕಲ್ಯಾಣ್ ಅವರ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದು, ಶೀಘ್ರದಲ್ಲೇ ಸಿನಿಮಾದ ತಯಾರಕರಿಂದ ಅಧಿಕೃತ ಪ್ರಕಟಣೆಯನ್ನು ನಿರೀಕ್ಷಿಸಲಾಗಿದೆ. ಪವನ್ ಅವರಿಗೆ ನಾಯಕಿಯಾಗಿ ಚಿತ್ರದಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ಜತೆಯಾದರೆ, ಕೇತಿಕಾ ಶರ್ಮಾ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ,(ಏಜೆನ್ಸೀಸ್).