ಎಜುಕೇಶನ್​ ವಿಚಾರದಲ್ಲಿ ಈ 3 ರಾಶಿಯವರನ್ನು ಯಾರಿಂದಲೂ ಮೀರಿಸಲಾಗದು! ನಿಮ್ಮ ರಾಶಿ ಯಾವುದು? Zodiac Signs

Zodiac Signs
Published on

Zodiac Signs : ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ ಏನಾಗುತ್ತದೆ? ಉದ್ಯೋಗ ಸಿಗುತ್ತದೆಯೇ ಅಥವಾ ಇಲ್ಲವೇ? ಮದುವೆ ಆಗುತ್ತಾ? ಚೆನ್ನಾಗಿ ಓದಿ, ಒಳ್ಳೆಯ ಉದ್ಯೋಗ ಪಡೆದು ಜೀವನದಲ್ಲಿ ಸೆಟಲ್​ ಆಗ್ತೀನಾ? ಎಂಬಿತ್ಯಾದಿ ವಿಚಾರಗಳನ್ನು ತಿಳಿದುಕೊಳ್ಳುವ ಆಸಕ್ತಿಯನ್ನು ಜನರು ತೋರಿಸುತ್ತಾರೆ. ಆದರೆ, ಕೆಲವರಿಗೆ ಜ್ಯೋತಿಷ್ಯದ ಮೇಲೆ ನಂಬಿಕೆ ಇರುವುದಿಲ್ಲ. ಆದರೂ ಬಹುತೇಕ ಮಂದಿ ಜಾತಕವನ್ನು ನಂಬುತ್ತಾರೆ. ಈ ಕಾರಣಕ್ಕೆ ಇಂದಿಗೂ ಜ್ಯೋತಿಷಿಗಳಿಗೆ ತುಂಬಾ ಬೇಡಿಕೆ ಇದೆ.

ಜ್ಯೋತಿಷ್ಯದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ ಜನಿಸುತ್ತಾನೆ ಎಂಬುದು ಅವನ ಭವಿಷ್ಯದ ಜೀವನ, ವ್ಯಕ್ತಿತ್ವದ ಗುಣ ಲಕ್ಷಣಗಳು, ಆರ್ಥಿಕ ಪರಿಸ್ಥಿತಿ ಮತ್ತು ಆತನ ಸಕಾರಾತ್ಮಕ ಹಾಗೂ ನಕಾರಾತ್ಮಕ ಗುಣಗಳ ಮೇಲೆ ಪ್ರಮುಖ ಪ್ರಭಾವ ಬೀರುತ್ತದೆ ಎಂದು ಅನಾದಿ ಕಾಲದಿಂದಲೂ ನಂಬಲಾಗಿದೆ. ಈ ಕಾರಣಕ್ಕೆ ಹುಟ್ಟಿದ ತಕ್ಷಣ ಸಮಯವನ್ನು ನೋಡಲಾಗುತ್ತದೆ.

ಇಡೀ ಜ್ಯೋತಿಷ್ಯ ನಿಂತಿರುವುದು ಗ್ರಹಗಳ ಆಧಾರದ ಮೇಲೆ. ಏಕೆಂದರೆ, ಗ್ರಹಗಳ ಚಲನೆಯು ರಾಶಿಚಕ್ರ ಮತ್ತು ನಕ್ಷತ್ರಗಳ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿಯೇ ಏನಾದರೂ ನಡೆದರೆ ಎಲ್ಲದಕ್ಕೂ ಗ್ರಹಗತಿಗಳೇ ಕಾರಣ ಎಂದು ನಮ್ಮ ಹಿರಿಯರು ಹೇಳುವುದನ್ನು ಕೂಡ ನಾವು ನೋಡಿದ್ದೇವೆ. ಇದು ಬಹುತೇಕ ಸಂದರ್ಭಗಳಲ್ಲಿ ನಿಜವೂ ಆಗಿದೆ. ಹೀಗಾಗಿ ಜ್ಯೋತಿಷ್ಯವನ್ನು ಬಹುತೇಕ ಮಂದಿ ನಂಬುತ್ತಾರೆ. ಏನೇ ಕಹಿ ಘಟನೆ ನಡೆದರೆ ಅದಕ್ಕೆ ಜ್ಯೋತಿಷ್ಯದಲ್ಲಿ ಪರಿಹಾರ ಇದೆ ಎಂದು ಅನೇಕ ಮಂದಿ ನಂಬುತ್ತಾರೆ.

ಅಂದಹಾಗೆ, ಕೆಲವು ರಾಶಿಚಕ್ರ ಚಿಹ್ನೆಗಳಲ್ಲಿ ಜನಿಸಿದ ಜನರು ಸ್ವಾಭಾವಿಕವಾಗಿಯೇ ಅಧ್ಯಯನ ಅಥವಾ ಶಿಕ್ಷಣ ವಿಚಾರದಲ್ಲಿ ಬಹಳ ಪ್ರತಿಭಾನ್ವಿತರಾಗಿರುತ್ತಾರೆ. ಇತರರು ಒಂದು ವಾರದಲ್ಲಿ ಕಲಿಯುವ ವಿಷಯಗಳನ್ನು ಅವರು ಎರಡು ಅಥವಾ ಮೂರು ದಿನಗಳಲ್ಲಿ ಸುಲಭವಾಗಿ ಕಲಿಯುತ್ತಾರಂತೆ. ಹಾಗಾದರೆ, ಅಂತಹ ಪ್ರತಿಭೆಯನ್ನು ಹೊಂದಿರುವ ರಾಶಿಗಳು ಯಾವುವು ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.

ಕನ್ಯಾ ರಾಶಿ

ಕನ್ಯಾ ರಾಶಿಯವರು ತಮ್ಮ ಸೂಕ್ಷ್ಮ ಬುದ್ಧಿಮತ್ತೆಗೆ ಹೆಸರುವಾಸಿ. ಅವರು ವಿಷಯಗಳನ್ನು ಸಂಘಟಿಸಲು ಮತ್ತು ಪಟ್ಟಿ ಮಾಡಲು ಬಹಳ ಆಸಕ್ತಿ ಹೊಂದಿರುತ್ತಾರೆ. ಈ ಗುಣ ಅಧ್ಯಯನದಲ್ಲಿ ಅವರಿಗೆ ಸಹಾಯ ಮಾಡುತ್ತದೆ. ಕನ್ಯಾ ರಾಶಿಯವರು ತುಂಬಾ ಪ್ರಾಯೋಗಿಕರು ಎಂದು ತಿಳಿದುಬಂದಿದೆ. ಅವರ ಸಮಸ್ಯೆ ಪರಿಹರಿಸುವ ಸಾಮರ್ಥ್ಯವು ಗಣಿತ ಮತ್ತು ವಿಜ್ಞಾನದಂತಹ ವಿಷಯಗಳಲ್ಲಿ ಅವರನ್ನು ಉತ್ತಮಗೊಳಿಸುತ್ತದೆ. ಅವರು ಶೈಕ್ಷಣಿಕವಾಗಿ ಶ್ರೇಷ್ಠರಾಗುತ್ತಾರೆ.

ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರು ತುಂಬಾ ಉತ್ಸಾಹಭರಿತರು ಮತ್ತು ದೃಢನಿಶ್ಚಯವುಳ್ಳವರು. ಅವರು ಏನನ್ನಾದರೂ ಮಾಡಲು ಮನಸ್ಸು ಮಾಡಿದಾಗ, ಅದನ್ನು ಸಾಧಿಸಲು ಅವರು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಾರೆ. ಅವರು ಯಶಸ್ವಿಯಾಗಲು ಕಠಿಣ ಪರಿಶ್ರಮ ಪಡಲು ಸಿದ್ಧರಿರುವುದರಿಂದ ಉತ್ತಮ ವಿದ್ಯಾರ್ಥಿಗಳನ್ನಾಗಿ ಮಾಡುತ್ತದೆ. ಅವರು ತುಂಬಾ ಕುತೂಹಲದಿಂದ ಕೂಡಿರುತ್ತಾರೆ, ಅಂದರೆ ಅವರು ಹೊಸ ವಿಷಯಗಳನ್ನು ಕಲಿಯಲು ಇಷ್ಟಪಡುತ್ತಾರೆ. ಜ್ಞಾನದ ಬಗ್ಗೆ ಅವರ ಉತ್ಸಾಹವು ಅವರನ್ನು ಅಧ್ಯಯನದಲ್ಲಿ ಅತ್ಯುತ್ತಮವಾಗಿಸುತ್ತದೆ.

ಮಕರ ರಾಶಿ

ಮಕರ ರಾಶಿಯವರು ತಮ್ಮ ಶಿಸ್ತು ಮತ್ತು ಕಠಿಣ ಪರಿಶ್ರಮಕ್ಕೆ ಹೆಸರುವಾಸಿ. ಅವರು ಗುರಿಗಳನ್ನು ನಿಗದಿಪಡಿಸುತ್ತಾರೆ ಮತ್ತು ಅವುಗಳನ್ನು ಸಾಧಿಸಲು ಏನು ಬೇಕಾದರೂ ಮಾಡುತ್ತಾರೆ. ಇದು ಅವರನ್ನು ಅತ್ಯುತ್ತಮ ವಿದ್ಯಾರ್ಥಿಗಳನ್ನಾಗಿ ಮಾಡುತ್ತದೆ. ಏಕೆಂದರೆ ಅವರು ಯಶಸ್ವಿಯಾಗಲು ಅಗತ್ಯವಾದ ಸಮಯ ಮತ್ತು ಶ್ರಮವನ್ನು ಹಾಕಲು ಸಿದ್ಧರಿರುತ್ತಾರೆ. ಮಕರ ರಾಶಿಯವರು ತುಂಬಾ ಜವಾಬ್ದಾರಿಯುತರು. ಅಂದರೆ, ಅವರು ಯಾವಾಗಲೂ ತಮ್ಮ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತಾರೆ. ಅಧ್ಯಯನದ ವಿಷಯಕ್ಕೆ ಬಂದಾಗ ಯಾವುದೇ ರೀತಿಯಲ್ಲೂ ಎಡವುದಿಲ್ಲ ಎಂಬುದನ್ನು ಯಾವುದೇ ಅವಕಾಶದಲ್ಲಿ ಯಾರಿಗಾದರೂ ಈ ರಾಶಿಯವರು ಸಾಬೀತುಪಡಿಸುತ್ತಾರೆ.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ “ವಿಜಯವಾಣಿ ಡಾಟ್​ ನೆಟ್”​ ಜವಾಬ್ದಾರರಾಗಿರುವುದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net