More

    ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಆಗಮನ ಸಾಧ್ಯತೆ; ಕರ್ನಾಟಕಕ್ಕೆ ಯಾವಾಗ ಮಾನ್ಸೂನ್ ಪ್ರವೇಶ?

    ಬೆಂಗಳೂರು: ಈ ಬಾರಿ ನೈಋತ್ಯ ಮಾನ್ಸೂನ್ (ಮುಂಗಾರು ಮಳೆ) ಜೂ. 5 ಅಥವಾ ಜೂ. 6ರಂದು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಸದ್ಯ ಕೇರಳ ಸಮೀಪದಲ್ಲಿ ಮಾರುತಗಳಿದ್ದು, ಬಂಗಾಳಕೊಲ್ಲಿಯಲ್ಲಿ ಮಾರುತಗಳು ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿ ಅನುಕೂಲವಾಗಿದೆ. ಇದರಿಂದಾಗಿ, ಮಂದಿನ 48 ಗಂಟೆಯಲ್ಲಿ ಕೇರಳಕ್ಕೆ ಆಗಮಿಸುವ ಸಾಧ್ಯತೆ ಹೆಚ್ಚಿದೆ.
    ಕೇರಳಕ್ಕೆ ಪ್ರವೇಶಿಸುವ ಮಾರುತಗಳು ಪ್ರಬಲವಾದರೆ ಒಂದೆರೆಡು ದಿನಗಳಲ್ಲಿ ಅಂದರೆ ಜೂ. 6ರ ಬಳಿಕ ಕರ್ನಾಟಕಕ್ಕೆ ಪ್ರವೇಶಿಸಲಿವೆ. ಒಂದು ವೇಳೆ ಮಾರುತಗಳು ದುರ್ಬಲಗೊಂಡರೆ ತುಸು ವಿಳಂಬವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಂದಾಜಿಸಿದೆ.

    ಈ ಮಧ್ಯೆ, ಮುಂದಿನ ನಾಲ್ಕೈದು ದಿನಗಳಲ್ಲಿ ಚಂಡಮಾರುತ ಸಂಭವಿಸುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ವಾಯುಭಾರ ಕುಸಿತವು ಚಂಡಮಾರುತವಾಗಿ ರೂಪುಗೊಳ್ಳಲಿದೆ. ಒಂದು ವೇಳೆ ಚಂಡಮಾರುತ ಉಂಟಾಗಿ ಮಾನ್ಸೂನ್ ಮೇಲೆ ದುಷ್ಪಾರಿಣಾಮ ಬೀರಿದರೆ ಮಾರುತಗಳು ದುರ್ಬಲಗೊಳ್ಳಲಿವೆ. ಇದರಿಂದ ರಾಜ್ಯಾದ್ಯಂತ ಮಾರುತಗಳು ಆವರಿಸಲು ತುಸು ಸಮಯ ಬೇಕಾಗುತ್ತದೆ. ಮುಂದಿನ ಎರಡು ದಿನದಲ್ಲಿ ಸೈಕ್ಲೋನ್ ಯಾವ ಕಡೆ ಸಾಗುತ್ತದೆ ಹಾಗೂ ಅದರ ತೀವ್ರತೆ ಹೇಗಿರುತ್ತದೆ ಇತ್ಯಾದಿ ಮಾಹಿತಿಗಳ ಕುರಿತು ಸ್ಪಷ್ಟ ಚಿತ್ರಣ ತಿಳಿದುಬರಲಿದೆ.

    ಇದನ್ನೂ ಓದಿ: ಒಡಿಶಾ ರೈಲು ಅಪಘಾತ ಪ್ರಕರಣ: ಕಠಿಣ ಕ್ರಮದ ಎಚ್ಚರಿಕೆ ನೀಡಿದ ಪೊಲೀಸರು; ಯಾರಿಗೆ, ಯಾಕೆ?

    ಅಲ್ಲದೆ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ಮುಂದಿನ ಐದು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಮಳೆ ಬೀಳುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ ಬೀಳಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ.

    ಇದನ್ನೂ ಓದಿ: ಪತಿಗಿಂತ ಪತ್ನಿಗೇ ಹೆಚ್ಚು ಸಂಪಾದನೆ; ಜೀವನಾಂಶ ನೀಡಲಾಗದು ಎಂಬುದನ್ನು ಎತ್ತಿ ಹಿಡಿದ ಕೋರ್ಟ್

    ಮಾನ್ಸೂನ್ ವಿಳಂಬಕ್ಕೆ ಕಾರಣವೇನು?: ವಾಡಿಕೆಯಂತೆ ಜೂ. 1 ಅಥವಾ ಜೂ. 2ರಂದು ಕೇರಳಕ್ಕೆ ಮುಂಗಾರು ಮಾರುತಗಳು ಆಗಮಿಸಬೇಕಿತ್ತು. ಆದರೆ, ಮುಂಗಾರು ಪೂರ್ವದಲ್ಲಿ ಉಂಟಾಗಿದ್ದ ತೇವಾಂಶ ಕೊರತೆ, ಗಾಳಿ ವೇಗ ಇಲ್ಲದಿರುವುದು ಹಾಗೂ ಮೋಕಾ ಚಂಡಮಾರುತವೂ ತೇವಾಂಶ ಭರಿತ ಮೋಡಗಳನ್ನು ಸೆಳೆದಿದ್ದೂ ಸೇರಿ ಇತರೆ ಕಾರಣಗಳಿಂದ ವಾಡಿಕೆಯಂತೆ ಆಗಮನವಾಗಬೇಕಿದ್ದ ಮಾರುತಗಳು ಮೇಲೆ ಪರಿಣಾಮ ಬೀರಿದ್ದವು. ಇದರಿಂದಾಗಿ, ಕೇರಳಕ್ಕೆ ಮಾರುತಗಳ ಆಗಮನಕ್ಕೆ ವಿಳಂಬವಾಯಿತು.

    ಸಿದ್ದರಾಮಯ್ಯ ಕುರಿತು ಹನಿಗವಿಯ ವರ್ಷದ ಹಿಂದಿನ ತಮಾಷೆ ನಿಜವಾಯಿತು!

    ಮುಂದಿನ ಒಂದು ವರ್ಷದಲ್ಲಿನ ಉಚಿತ ಚಿಕಿತ್ಸೆಗೆಂದೇ 65 ಕೋಟಿ ರೂ. ಮೀಸಲು: ಅಮೃತ ಆಸ್ಪತ್ರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts