ಈ ಮಳೆ ಯಾವಾಗ ನಿಲ್ಲುತ್ತೆ? ಇಲ್ಲಿದೆ ಹವಾಮಾನ ಇಲಾಖೆ ಉತ್ತರ

ನ. 22ರಿಂದ ರಾಜ್ಯದಲ್ಲಿ ಮಳೆ ಕ್ಷೀಣ... ವರುಣಾರ್ಭಟಕ್ಕೆ ಬೀಳಲಿದೆ ಬ್ರೇಕ್ Rain in Karnataka - youtube
Published on

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಶುಕ್ರವಾರವೂ ವಿವಿಧ ಭಾಗಗಳಲ್ಲಿ ಅಧಿಕ ಮಟ್ಟದಲ್ಲಿ ಮಳೆ ಸುರಿದಿದೆ. ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದಿನ 2 ದಿನ ಮುಂದುವರಿಯಲಿದ್ದು, ನ.22ರಿಂದ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ನ.20ರಂದು ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿಯಲ್ಲಿ ನ. 20, 21 ರಂದು ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ನ.22 ರಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಕ್ಷೀಣಿಸುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net