

ಬೆಂಗಳೂರು: ಸ್ಯಾಂಡಲ್ವುಡ್ನ ಹಿರಿಯನಟ, ದಿವಂಗತ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ವಿಧಾನಸೌಧದಲ್ಲಿ ಇಂದು ಮಹತ್ವದ ಸಭೆ ನಡೆಸಿದರು.
ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಪ್ರಥಮ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಅಂಬರೀಶ್, ರಾಕ್ಲೈನ್ ವೆಂಕಟೇಶ್, ಹಿರಿಯ ಹಾಸ್ಯನಟ ದೊಡ್ಡಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದನ್ನೂ ಓದಿರಿ ಮಂಡ್ಯ ರೈತನಿಗೆ ಪ್ರಧಾನಿ ಮೋದಿ ಶ್ಲಾಘನೆ
ಅಂಬರೀಶ್ ಪ್ರತಿಷ್ಠಾನದ ಸಭೆಯಲ್ಲಿ ಸಮಿತಿ ರಚನೆ ಅಗಿದೆ. ಅಂಬರೀಶ್ ಸ್ಮಾರಕ ನಿರ್ಮಾಣಕ್ಕಾಗಿ ಕಂಠೀರವ ಸ್ಟುಡಿಯೋ ಆವರಣದಲ್ಲಿ 1.34 ಎಕರೆ ಜಾಗಕ್ಕೆ ಇವತ್ತಿನ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಆದಷ್ಟು ಬೇಗ ಕೆಲಸ ಅರಂಭ ಮಾಡುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಈ ವರ್ಷ 5 ಕೋಟಿ ರೂಪಾಯಿ ಮೀಸಲಿಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಸುಮಲತಾ ಅಂಬರೀಶ್ ವಿವರಿಸಿದರು.