More

  ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಲ್ಲಿ?

  ಕೆ.ಎಂ.ದೊಡ್ಡಿ: ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರು ಸಹ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡದಿರುವುದು ವಿಪರ್ಯಾಸದ ಸಂಗತಿ ಎಂದು ಶಾಸಕ ಕದಲೂರು ಉದಯ್ ಲೇವಡಿ ಮಾಡಿದರು.


  ಇಲ್ಲಿನ ಅಲಭುಜನಹಳ್ಳಿ ರಸ್ತೆಯಲ್ಲಿನ ಜೆಎಂ ಕನ್ವೆನಷನ್ ಹಾಲ್‌ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಚಿಕ್ಕರಸಿನಕೆರೆ ಹೋಬಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ಪಕ್ಷ ಅಧಿಕೃತ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಘೋಷಣೆ ಮಾಡದಿರುವುದು ಆ ಪಕ್ಷಗಳಲ್ಲಿರುವ ಗೊಂದಲಕ್ಕೆ ಕಾರಣವಾಗಿದೆ ಎಂದು ದೂರಿದರು.


  ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಗ್ರಾಮಗಳಲ್ಲಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಿ. ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಅಧಿಕ ಮತ ಪಡೆದು ಗೆಲುವು ಸಾಧಿಸಲು ಕಾರ್ಯೋನ್ಮುಖರಾಗಬೇಕು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ ಒಂದು ಸ್ಥಾನ ಪಡೆದುಕೊಂಡಿತ್ತು. ಆದರೆ, ಈ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವ ವಿಶ್ವಾಸವಿದ್ದು, ಕಾಂಗ್ರೆಸ್ ಕಾರ್ಯಕರ್ತರು ಉತ್ಸಾಹದಿಂದ ಚುನಾವಣೆ ಎದುರಿಸಬೇಕು ಎಂದರು.


  ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು. ಮಂಡ್ಯ ಲೋಕಸಭಾ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೇರಿದಂತೆ 7 ಶಾಸಕರು ಮತ್ತು 2 ವಿಧಾನಪರಿಷತ್ ಸದಸ್ಯರಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಹೇಳಿದರು.


  ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಮಾತನಾಡಿ, ನಾನು ಮಂಡ್ಯ ಜಿಲ್ಲೆಯ ಮಗನಾಗಿದ್ದು, ನಾನು ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ ಹೊರತು ಹಣ ಮಾಡುವ ಉದ್ದೇಶ ನನ್ನದಲ್ಲ. ನಿಮ್ಮಗಳ ಸೇವೆ ಮಾಡಲು ನನಗೊಂದು ಅವಕಾಶ ಮಾಡಿ ಕೊಡಿ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಉತ್ತಮ ಆಡಳಿತ ನೀಡುತ್ತಿದೆ. ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಲು ಸಹಕಾರಿಯಾಗಲಿವೆ ಎಂದರು.


  ಜಿಪಂ ಮಾಜಿ ಅಧ್ಯಕ್ಷ ಬಿ.ಬಸವರಾಜು, ಮಾಜಿ ಸದಸ್ಯ ಎ.ಎಸ್.ರಾಜೀವ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಟ್ಟನಹಳ್ಳಿ ಶಿವಲಿಂಗೇಗೌಡ, ಮದ್ದೂರು ಕಾಂಗ್ರೆಸ್ ಉಸ್ತುವಾರಿ ನಾಗರಾಜು, ಮುಖಂಡರಾದ ಚಂದೂಪುರ ಹರೀಶ್, ಚಿದಂಬರ್, ಕರಡಕೆರೆ ಮನು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts